ನಿಟ್ಟೆ: 'ತಂತ್ರಜ್ಞಾನ ಮತ್ತು ಸಂವಹನದ ಚಾತುರ್ಯತೆಯಿದ್ದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಹುಡುಕಿಬರುತ್ತವೆ. ಇಂದಿನ ದಿನಗಳಲ್ಲಿ ಪಠ್ಯದೊಂದಿಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ' ಎಂದು ರಿಸ್ಕನೆಕ್ಟ್ ಸರ್ವೀಸಸ್ ಪ್ರೈ.ಲಿ ಮಂಗಳೂರಿನ ಹೆ.ಆರ್ ಮೆನೇಜರ್ ಶುಭಾ ಬಿ ಅಭಿಪ್ರಾಯಪಟ್ಟರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದ ಸಂಘವಾದ ಎಸ್.ಎ.ಎಂ.ಸಿ.ಎ ನ್ನು ಡಿ.೧ರಂದು ಉದ್ಘಾಟಿಸಿ ಅವರು ಮಾತನಾಡಿದರು. ಎಂ.ಸಿ.ಎ ವಿದ್ಯಾಭ್ಯಾಸದ ಅನಂತರ ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳ ಬಗೆಗೆ ಅವರು ಸವಿವರವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮುಂದಿನ ಒಂದು ವರ್ಷಗಳ ಕಾಲ ಎಂ.ಸಿ.ಎ ವಿಭಾಗದ ವಿದ್ಯಾರ್ಥಿ ಸಂಘವು ಹಲವಾರು ಜ್ಞಾನಾಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಸ್ಯಾಮ್ಕಾ ವಿದ್ಯಾರ್ಥಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಿಟ್ಟೆ ಎಂ.ಸಿ.ಎ ವಿಭಾಗದ ಮುಖ್ಯಸ್ಥ ಡಾ|ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಎಸ್.ಎ.ಎಂ.ಸಿ.ಎ ಅಧ್ಯಕ್ಷ ಜೋಯೆಲ್ ಜೋಸೆಫ್ ವಾರ್ಷಿಕ ವರದಿ ವಾಚಿಸಿದರು. ಎಸ್.ಎ.ಎಂ.ಸಿ.ಎ ಸಂಯೋಜಕಿ ಸರಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಎಸ್.ಎ.ಎಂ.ಸಿ.ಎ ಕಾರ್ಯದರ್ಶಿ ಶ್ರಾವ್ಯಾ ಆಚಾರ್ಯ ವಂದಿಸಿದರು. ವಿದ್ಯಾರ್ಥಿನಿಯರಾದ ದೇವಿಕಾ ಶ್ರೀಲಕ್ಷ್ಮೀ, ಮಾನಸ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಸುಪ್ರವಿ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಅನಂತರ ಅತಿಥಿಗಳೊಡನೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವು ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ