ಮಂಗಳೂರು : ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮ ಡಿಸೆಂಬರ್ 17ರ ಶನಿವಾರ ಬೆಳಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ಥಾನಘಟ್ಟದಲ್ಲಿ ನೆರವೇರಲಿದೆ.
ರಾಜ್ಯ ಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ದಿವ್ಯ ಸಾನಿಧ್ಯ ವಹಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ನಾಮಫಲಕ ಅನಾವರಣ ಮಾಡುವರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವಕೋಟ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರಎಸ್., ಸಂಸದರಾದ ನಳಿನ್ ಕುಮಾರ್‍ಕಟೀಲ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕರಾದಯು.ಟಿ.ಖಾದರ್, ಡಾ. ಭರತ್ ಶೆಟ್ಟಿ ವೈ.,ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಡಿ. ವೇದವ್ಯಾಸ್ ಕಾಮತ್ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್‍ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ ಸಿಂಹ ನಾಯಕ್,ಮಂಜುನಾಥ ಭಂಡಾರಿ ಹಾಗೂಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮತ್ತುಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್‍ಅಧ್ಯಕ್ಷೆ ಜಯ ಮೋನಪ್ಪಗೌಡ ಭಾಗವಹಿಸುವರು.