ಡಿ.16 : ಕೆ.ಜಿ.ಟಿ.ಟಿ.ಐ ನೂತನ ಕಟ್ಟಡದ ಶಂಕುಸ್ಥಾಪನೆ

Upayuktha
0

 


ಮಂಗಳೂರು : ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ಮಲ್ಟಿ ಸ್ಕಿಲ್ ಡೆವಲಪ್‍ಮೆಂಟ್ ಸೆಂಟರ್(ಕೆಜಿಎಂಎಸ್‍ಬಿಸಿ) ಸೊಸೈಟಿ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಜರ್ಮನ್‍ ತಾಂತ್ರಿಕ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಡಿ.16ರ ಶುಕ್ರವಾರ ಸಂಜೆ4.30ಕ್ಕೆ ನಗರದ ಕದ್ರಿಹಿಲ್ಸ್ ನಲ್ಲಿರುವ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಐಟಿಐ (ಕೆ.ಜಿ.ಟಿ.ಟಿ.ಐ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.



ಉನ್ನತ ಶಿಕ್ಷಣ, ಮಾಹಿತಿತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್. ಅವರು ಕರ್ನಾಟಕ ಜರ್ಮನ್‍ ತಾಂತ್ರಿಕ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.



ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವಕೋಟ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರಎಸ್. ಸಂಸದರಾದ ನಳಿನ್ ಕುಮಾರ್ ಕುಟೀಲ್‍ ಹಾಗೂರಾಜ್ಯ ಸಭಾ ಸಂಸದರಾದ ಡಾ.ಡಿ. ವಿರೇಂದ್ರ ಹೆಗ್ಗಡೆ, ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ್‍ಕಾಮತ್‍ ಅಧ್ಯಕ್ಷತೆ ವಹಿಸುವರು.



ಗೌರವಾನ್ವಿತ ಅಥಿತಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ.ಖಾದರ್, ಡಾ. ಭರತ್ ಶೆಟ್ಟಿ ವೈ.,ರಾಜೇಶ್ ನಾಯ್ಕ್‍ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್‍ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ವಿದ್ಯುನ್ಮಾನಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮತ್ತು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ನಗರಾಭಿವೃದ್ಧಿ ಪ್ರಾಧಿಕಾರದಅಧ್ಯಕ್ಷರವಿಶಂಕರ್ ಮಿಜಾರ್, ಮಂಗಳೂರು ಮಹಾಪೌರ ಜಯಾನಂದಅಂಚನ್, ಉಪಮೇಯರ್ ಪೂರ್ಣಿಮಾ ಹಾಗೂ ಕಾರ್ಪೊರೇಟರ್ ಶಕೀಲ ಕಾವ ಭಾಗವಹಿಸುವರು.



ವಿಶೇಷ ಆಹ್ವಾನಿತರಾಗಿ ಮಂಗಳೂರು ನಗರ ಪೋಲಿಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್‍ಅಧೀಕ್ಷಕ ಸೋನಾವಣೆ ಋಷಿಕೇಶ್ ಭಗವಾನ್,  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಭಾಸ್ಕರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸುವರು.  

Post a Comment

0 Comments
Post a Comment (0)
To Top