ಉಜಿರೆ: ಮಂಗಳೂರು - ಶಿರಾಡಿ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದರು.
ಸದ್ಯ ಮಳೆ ನಿಂತಿದ್ದು, ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ಹೆಗ್ಗಡೆಯವರು ತಿಳಿಸಿದ್ದರು.
ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
🗞️📲 ಉಪಾಯುಕ್ತ ನ್ಯೂಸ್ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ