ವಿ.ಸಿ.ಇ.ಟಿ: 100% ಫಲಿತಾಂಶ ದಾಖಲಿಸಿದ ಎಂ.ಬಿ.ಎ ವಿಭಾಗ

Upayuktha
0

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 44 ವಿದ್ಯಾರ್ಥಿಗಳು ಹಾಜರಾಗಿದ್ದು 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮಂಜುನಾಥ್ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದು, ಶ್ರೀರಂಜಿನಿ ದ್ವಿತೀಯ ಸ್ಥಾನಿಯಾಗಿದ್ದಾರೆ.


ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಅಯ್ಯರ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top