ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ವಿಭಾಗಕ್ಕೆ ಸ್ವಾಗತಿಸುವ ʼಪರಿಚಯ 2022ʼ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ತಮ್ಮ ಮಾತಿನಲ್ಲಿ ಪುರಾತತ್ವಶಾಸ್ತ್ರ ವಿಭಾಗದ ಮಹತ್ವ ಮತ್ತು ಅದರಿಂದ ಭವಿಷ್ಯಕ್ಕೆ ಆಗಬಹುದಾದಂತಹ ಅನುಕೂಲಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಕಾಲೇಜಿನಲ್ಲಿ ಭವಿಷ್ಯದ ಎರಡು ವರ್ಷಗಳು ಆಶಾದಾಯಕ ಮತ್ತು ಜ್ಞಾನದಿಂದ ಕೂಡಿರಲಿ ಎಂದು ಶುಭ ಹಾರೈಸಿದರು. ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಗಣಪತಿ ಗೌಡ ಅವರು ವಿಭಾಗದ ವಿದ್ಯಾರ್ಥಿಗಳಿಗೆ ಶುಭಕೋರಿದರು.
ವಿಭಾಗದ ಸಂಯೋಜಕ ಡಾ. ಕುಮಾರಸ್ವಾಮಿ ಎಂ ಅವರು ತಮ್ಮ ಮಾತುಗಳಲ್ಲಿ ಹಿರಿಯ ವಿದ್ಯಾರ್ಥಿಗಳ ಕಾರ್ಯವೈಖರಿ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ಏನನ್ನ ಕಲಿಯಬೇಕು, ಮತ್ತು ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬ ಹಿತನುಡಿಗಳನ್ನು ಆಡಿದರು. ವಿಭಾಗದ ಹಿರಿಯ ಪ್ರಾಧ್ಯಾಪಿಕೆ ಡಾ.ಮೀನಾಕ್ಷಿ ಎಂ. ಎಂ, ಉಪನ್ಯಾಸಕರಾದ ರತನ್, ರಂಜಿತ್, ಸಿಬ್ಬಂದಿ ವಿನೀಶ್ ಪಿಜಿ, ದ್ವಿತೀಯ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ