ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ. ಬಾಹ್ಯ ಸೌಂದರ್ಯಕ್ಕಿಂತಲೂ ಆಂತರಿಕ ಸೌಂದರ್ಯಕ್ಕೆ ಒತ್ತು ಕೊಡಬೇಕು. ಕಳೆದು ಹೋದ ಸಮಯ ಮತ್ತೆ ಸಿಗುವುದಿಲ್ಲ. ನಾವು ಆತ್ಮಾವಲೋಕನ ಮಾಡಿಕೊಂಡು ಮುಂದುವರಿದಾಗ ಸಮಾಜದಲ್ಲಿ ಒಂದು ಶಕ್ತಿಯಾಗಲು ಸಾಧ್ಯ" ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ಅಭಿಪ್ರಾಯಪಟ್ಟರು.
ಅವರು ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಎಲ್ಲರನ್ನೂ ಒಗ್ಗೂಡಿಸುವ ನಮ್ಮ ದೇಶದ ಬಗ್ಗೆ ಅಭಿಮಾನ, ಗೌರವ, ಪ್ರೀತಿ ಬೆಳೆಸಿಕೊಂಡಾಗ ಮಾತ್ರ ದೇಶ ಪ್ರಗತಿಯಾಗುತ್ತದೆ ಎಂದರು. ಶಾಸಕರು ಈ ಸಂದರ್ಭದಲ್ಲಿ ಸಂಸ್ಥೆಯ ಕಾಮಗಾರಿ ಗಳಿಗೆ ಅನುದಾನದ ಭರವಸೆ ನೀಡಿದರು. ನಡ ಗ್ರಾ.ಪಂ. ಅಧ್ಯಕ್ಷ ವಿಜಯಗೌಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಾಲಕಿಯರ ಶೌಚಾಲಯ ಗುತ್ತಿಗೆದಾರ ಜನಾರ್ದನ ಗೌಡ, ನಡ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಪ್ರಥಮ ದರ್ಜೆ ಗುಮಾಸ್ತೆ ಶ್ರೀಮತಿ ಜಾಹ್ನವಿ, ಸಂಸ್ಥೆಯ ಕ್ರೀಡಾ ತರಬೇತುದಾರ ಹರ್ಷ ಕುಮಾರ್- ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಆರಿಗ, ಸ್ಟಾರ್ ಲೈನ್ ಶಿಕ್ಷಣ ಸಂಸ್ಥೆಯ ಸಂಚಾಲಕ ಹಬೀಬ್ ಸಾಹೇಬ್, ಗ್ರಾಮ ಪಂಚಾಯತ್ ಸದಸ್ಯ ಹರಿಶ್ಚಂದ್ರಗೌಡ, ಬೆಳ್ತಂಗಡಿ ಪ್ರಾ. ಕೃ. ಪ. ಸ. ಸಂಘದ ನಿರ್ದೇಶಕರಾದ ಮುನಿರಾಜ ಅಜ್ರಿ, ನಡ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಯಾಕುಬ್, ಕಾಲೇಜು ವಿದ್ಯಾರ್ಥಿ ನಾಯಕ ನಿತೇಶ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೀರಪ್ಪ ಸಾಲಿಯಾನ್ ಉಪಸ್ಥಿತರಿದ್ದರು.
ಗಣ್ಯರಾದ ವಸಂತ ವಿ. ಜಿ. ಕೂಲ್, ಹಾಲು ಉತ್ಪಾದಕ ಸಂಘದ ಜಯಂತ್ ಗೌಡ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಧಾಕರ್ ಪೂಜಾರಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಹಬೀಬ್ ಸಾಹೇಬ್ ಸಂಸ್ಥೆಗೆ ಗೋಡೆ ಗಡಿಯಾರ ಹಸ್ತಾoತರಿಸಿದರು. ಮುನಿರಾಜ ಅಜ್ರಿ ಕಾಲೇಜು ಗ್ರಂಥಾ ಲಯಕ್ಕೆ 10,000 ರೂ ಮೌಲ್ಯದ ಪುಸ್ತಕಗಳ ಘೋಷಣೆ ಮಾಡಿದರು. ಕಳೆದ 3 ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಭಿನಂದನೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರ ಅಭಿನಂದನೆ ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪ ನಿರ್ವಹಿಸಿದರು.
ಕ್ರೀಡಾ ವಿಭಾಗದ ವಿಜೇತರ ಪಟ್ಟಿಯನ್ನು ಕ್ರೀಡಾ ಸಂಯೋಜಕಿ ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ವಾಚಿಸಿದರು. ಉಪನ್ಯಾಸಕಿ ಶ್ರೀಮತಿ ವಸಂತಿಯವರ ಮಾತೆ ದಿ. ಸುಬ್ಬಮ್ಮರವರ ಸ್ಮರಣಾರ್ಥ ದತ್ತಿ ನಿಧಿ, ಕಾಲೇಜು ಉಪನ್ಯಾಸಕರು ತಮ್ಮ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕೊಡಮಾಡುವ ಪ್ರೋತ್ಸಾಹಕ ನಿಧಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸ ಲಾಯಿತು. ಇತಿಹಾಸ ಉಪನ್ಯಾಸಕಿ ಶ್ರೀಮತಿ ವಿದ್ಯಾ ನಿರ್ವಹಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಖೇತ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿ. ವಿ. ವರದಿ ವಾಚಿಸಿದರು ಮತ್ತು ಅತಿಥಿ ಗಳನ್ನು ವಂದಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ನೀಲಾವತಿ, ತೃಪ್ತಿ, ರಕ್ಷಿತಾ, ಬಿಸ್ಮಿತಾ, ಸವಿತಾ ಪ್ರಾರ್ಥಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಮೋಹನ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ