ಡಿ.29 ರಂದು 'ಕುವೆಂಪು ದರ್ಶನ' ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0

ಮಂಗಳೂರು: ಕುವೆಂಪು ಕನ್ನಡ ಅಧ್ಯಯನ ಕೇಂದ್ರ, ಕುಪ್ಪಳಿ, ಕನ್ನಡ ವಿಶ್ವವಿದ್ಯಾನಿಲಯ, ಹಂಪಿ ಹಾಗೂ ಕನ್ನಡ ಸಂಘ ಮತ್ತು ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ 'ಕುವೆಂಪು ದರ್ಶನ' ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕುಪ್ಪಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದಲ್ಲಿ ಡಿಸೆಂಬರ್‌ 29 (ಗುರುವಾರ) ಆಯೋಜಿಸಲಾಗಿದೆ.


ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸ.ಚಿ ರಮೇಶ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಮಾಧವ ಪೆರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ ಕೆ ಆಶಯ ಭಾಷಣ ಮಾಡಲಿದ್ದಾರೆ. ಮಧುರೈ ಕಾಮರಾಜ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ ಎನ್‌ ಮಹೇಶ, ಮದ್ರಾಸು ವಿವಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಂ ರಂಗಸ್ವಾಮಿ, ಕಾಸರಗೋಡು ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಹೆಚ್‌ ಮೊದಲಾದವರು ವಿಷಯ ಮಂಡನೆ ಮಾಡಲಿದ್ದಾರೆ.


ಮಂಗಳೂರಿನ ವಿವಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ, ವಿವಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಧಾ ಎನ್‌. ವೈದ್ಯ, ವಿವಿ ಸಂಧ್ಯಾ ಕಾಲೇಜಿನ ಉಪನ್ಯಾಸಕ ಡಾ. ವೆಂಕಟೇಶ ನಾಯಕ್‌ ಸಮನ್ವಯಕಾರರಾಗಿರಲಿದ್ದಾರೆ. ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ವಿಷಯ ಮಂಡನೆ ಮಾಡಲಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top