ಪುತ್ತೂರಿನಲ್ಲಿ ಇಂದು ಪ್ರೋ-ಕಬ್ಬಡ್ಡಿ ಪಂದ್ಯಾಟ

Upayuktha
0



ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ  ಆಯ್ದ ವಿದ್ಯಾರ್ಥಿ ತಂಡಗಳ ನಡುವೆ ಪ್ರೋ-ಕಬಡ್ಡಿ ಪಂದ್ಯಾಟವು ದಿನಾಂಕ 17 ಡಿಸೆಂಬರ್ ಶನಿವಾರದಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 


ಅಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಶಾಸಕ ಶ್ರೀ ಸಂಜೀವ ಮಠಂದೂರು ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಭಾರತೀಯ ಸೀಮಾ ಸುರಕ್ಷಾ ಬಲದ ವಿಶ್ರಾಂತ ಡೆಪ್ಯುಟಿ ಕಮಾಂಡೆಂಟ್ ಡಿ.ಚಂದಪ್ಪ ಮೂಲ್ಯ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ  ಸುಬ್ರಮಣ್ಯ ಭಟ್.ಟಿ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಗೌರವ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.


ಹುಡುಗರ 5 ತಂಡಗಳು ಮತ್ತು ಹುಡುಗಿಯರ 3 ತಂಡಗಳು ಇದರಲ್ಲಿ ಭಾಗವಹಿಸುತ್ತಿದ್ದು, ಮ್ಯಾಟ್ ಅಂಕಣದಲ್ಲಿ ಲೀಗ್ ಮಾದರಿಯಲ್ಲಿ ಈ ಸ್ಪರ್ಧೆಗಳು ನಡೆಯುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ. ತಿಳಿಸಿದ್ದಾರೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top