ಮಂಗಳೂರಿನಲ್ಲಿ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ ಕ್ರೀಡಾಕೂಟ

Upayuktha
0

 


ಮಂಗಳೂರು :  ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಸ್ಥಾಪಕರಾದ ಎ. ಶಾಮರಾವ್ ಅವರ ಆಶೀರ್ವಾದದೊಂದಿಗೆ, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ.ರಾಘವೇಂದ್ರರಾವ್ ಮತ್ತು ಎ.ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರು ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿಗಳಾದ ಡಾ.ಎ. ಶ್ರೀನಿವಾಸ್ ರಾವ್ ಅವರ ಮಾರ್ಗದರ್ಶನದಲ್ಲಿ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ. ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ಮಂಗಳೂರು ಇವರಿಂದ ಕ್ರೀಡಾಕೂಟ ದಿನಾಂಕ 19.12.2022 ರಿಂದ 20.12.2022ರ ವರೆಗೆ ಜರುಗಿತು. 


ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ.ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ನ ಪ್ರಾಂಶುಪಾಲರಾದ ಡಾ.ಫ್ಲೋರಿನ್ ಕ್ಲಾರಾ ಫೆರ್ನಾಂಡಿಸ್, ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ.ಶಾಮ ರಾವ್ ನರ್ಸಿಂಗ್ ಸ್ಕೂಲ್, ವಳಚ್ಚಿಲ್ ಕಮ್ಯುನಿಟಿ  ಹೆಲ್ತ್  ನರ್ಸಿಂಗ್  ವಿಭಾಗದ  ಮುಖ್ಯ ಪ್ರಾಧ್ಯಾಪಕರಾದ ಪ್ರೊ.ಪ್ರದೀಪ ಎಂ., ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ರೀಡಾ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top