ಅಂತರ್ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧೆ: ಮಧುರಾ ಕೆ.ಐ ಗೆ ಪ್ರಥಮ ಬಹುಮಾನ

Upayuktha
0 minute read
0

ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಮಧುರಾ ಕೆ.ಐ ಡಿಸೆಂಬರ್‌ 17ರಂದು ನಡೆದ 2ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ ವೈದ್ಯಕೀಯ ಕಾಲೇಜು ರಸಪ್ರಶ್ನೆ ಸ್ಪರ್ಧೆ KIMS UG MEDIAUIZ 2022 ನಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.

ಈ ಹಿಂದೆ ಸೆಪ್ಟೆಂಬರ್‌ನಲ್ಲಿ ನಗರದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನಲ್ಲಿ ಜರುಗಿದ ಅಂತರ್ ವೈದ್ಯಕೀಯ ಕಾಲೇಜು ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ರಾಜ್ಯಮಟ್ಟದ ರಸಪ್ರಶ್ನೆ ಹಾಗೂ ಪೋಸ್ಟರ್‌ ಮಂಡನೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದರು.

ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಗ್ರಾಮದ ಕಿಳಿಂಗಾರಿನವರಾದ ಈಕೆ ಈಶ್ವರ ಭಟ್‌ ಕಿಳಿಂಗಾರು ಮತ್ತು ಪೂರ್ಣಿಮಾ ದಂಪತಿಯ ಪುತ್ರಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top