ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಇತ್ತೀಚೆಗೆ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರ, ಭಾರತಿದಾಸನ್ ವಿಶ್ವವಿದ್ಯಾನಿಲಯ, ಭಾರತೀಯ ಮಹಿಳಾಅಧ್ಯಯನ ಸಂಘ (ಐಎಡಬ್ಲ್ಯುಎಸ್), ಮಹಿಳಾ ಅಧ್ಯಯನಕ್ಕಾಗಿ ಪ್ರಾದೇಶಿಕಸಂಘ ಮತ್ತು ಅಖಿಲ ಭಾರತ ಮಹಿಳಾಅಧ್ಯಯನ ವಿದ್ಯಾರ್ಥಿಗಳ ವೇದಿಕೆ ಸಹಯೋಗದಲ್ಲಿ ಮಹಿಳೆಯರು ಮತ್ತು ಬಾಲಕಿಯರ ವಿರುದ್ಧದ ಹಿಂಸೆಯ ವಿರುದ್ಧ ಜಾಗೃತಿಗಾಗಿ ರಾಷ್ಟ್ರೀಯ ವಿಚಾರಸಂಕಿರಣವನ್ನು ಆಯೋಜಿಸಿತ್ತು.
ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯಯಡಪಡಿತ್ತಾಯ ತಮ್ಮ ಉದ್ಘಾಟನಾ ಭಾಷಣದಲ್ಲಿ, ಮಹಿಳೆಯರ ಮೇಲಿನ ಹೆಚ್ಚಿನ ದೌರ್ಜನ್ಯ ಸಮಾಜದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಮಹಿಳೆಯರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ತಡೆಯಾಗುತ್ತದೆ. ಇದು ಪರೋಕ್ಷವಾಗಿ ಆರ್ಥಿಕ ಅಭಿವೃದ್ಧಿಗೆ ಅಪಾಯ. ಹೀಗಾಗಿ ಮಹಿಳೆಯರ ವಿರುದ್ಧದ ಹಿಂಸೆಯನ್ನು ಜಾಗತಿಕ ಸಾಂಕ್ರಾಮಿಕ ಎಂದು ಪರಿಗಣಿಸಬೇಕು ಎಂದರು.
“ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ, ಲಿಂಗ, ಜಾತಿ, ವರ್ಗ, ಪ್ರದೇಶ ಅಥವಾ ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರನ್ನು ಗೌರವಿಸುವ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈ ಕುರಿತ ಸ್ಪಷ್ಟನೀತಿಯನ್ನು ಅಭಿವೃದ್ಧಿಪಡಿಸಿದ್ದು, ನಮ್ಮ ಕ್ಯಾಂಪಸ್ ಅನ್ನು ಕಲಿಕೆಗೆ ಸುರಕ್ಷಿತ ಸ್ಥಳವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ” ಎಂದರು.
ಮುಖ್ಯ ಭಾಷಣದಲ್ಲಿ, ಭಾರತಿದಾಸನ್ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಪ್ರೊ.ಎನ್.ಮಣಿಮೇಕಲೈ ಮಾತನಾಡಿ, ಈ ಅಭಿಯಾನದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿಯೊಬ್ಬರೂ ಭಾಗವಹಿಸಲು ಅವಕಾಶವಿದೆ. ಇದು ಹಿಂಸೆಯ ವಿರುದ್ಧ ಧ್ವನಿ ಎತ್ತಬೇಕಾದ ಸಮಯ ಎಂದರು.
ಮಂಗಳೂರು ವಿಶ್ವವಿದ್ಯಾನಿಲಯ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ಮಾಜಿ ನಿರ್ದೇಶಕಿ ಪ್ರೊ.ಕಿಶೋರಿನಾಯಕ್ಕೆ ಅಧ್ಯಕ್ಷತೆ ವಹಿಸಿದ್ದರು. ಪ್ರಸ್ತುತ ನಿರ್ದೇಶಕಿ ಡಾ.ಅನಿತಾರವಿಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗುರುಗೋವಿಂದ್ ಸಿಂಗ್ ಇಂದ್ರಪ್ರಸ್ಥ ವಿವಿಯ ಸ್ಕೂಲ್ ಆಫ್ ಕಮ್ಯುನಿಕೇಷನ್ ಹಿರಿಯ ಸಹಾಯಕ ಪ್ರಾಧ್ಯಾಪಕಿ ಡಾ.ಕುಲ್ವೀನ್ಟ್ ರಹಾನ್, ಡಿಇಡಿ ಎಸ್ ನಿರ್ದೇಶಕಿ ಮೆರ್ಲಿನ್ಮಾರ್ಟಿಸ್, ಸಖಿಒನ್ಸ್ಟಾಪ್ಸೆಂಟರ್ ಆಡಳಿತಾಧಿಕಾರಿ ಪ್ರಿಯಾರಾಜ ಮೋಹನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ. ಯಶಸ್ವಿನಿ ಬಟ್ಟಂಗಾಯ ಉಪಸ್ಥಿತರಿದ್ದರು.