ಪುತ್ತೂರು: ಕಲ್ಲಡ್ಕದ ಶ್ರೀ ರಾಮ ವಿದ್ಯಾ ಸಂಸ್ಥೆಯಲ್ಲಿ ಡಿಸೆಂಬರ್ 24 ರಿಂದ 27 ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಧನುಷ, ಕಲಾ ವಿಭಾಗದ ಕುಸುಮ ಸಿ. ಎಂ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪುಣ್ಯಶ್ರೀ, ವಾಣಿಜ್ಯ ವಿಭಾಗದ ಶ್ರೇಯ, ವರ್ಷಿಣಿ, ಮನ್ಯ ಶೆಟ್ಟಿ, ಕಲಾ ವಿಭಾಗದ ಕೀರ್ತಿಲತಾ ಬಿ ಸಿ,ಅನನ್ಯ ಜಿ.ಕೆ ಭಾಗವಹಿಸಿದ್ದರು.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಕಾಂಕ್ಷ್ ಕೆ, ಅಮೃತಾನಂದ, ವಾಣಿಜ್ಯ ವಿಭಾಗದ ಶ್ರೇಯಸ್, ಗಣಪತಿ ಭಟ್, ಗಗನ್, ಕಲಾ ವಿಭಾಗದ ರಿತೇಶ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮಿಥನ್, ವಾಣಿಜ್ಯ ವಿಭಾಗದ ವಿನೀತ್, ಮೋಕ್ಷಿತ್, ಶರತ್ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ