ವಾಲಿಬಾಲ್ ತಂಡಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜ್ ಚೇತನ್‌ ಆಯ್ಕೆ

Upayuktha
0

 


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಚಿಂತನ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರು ಡಿಸೆಂಬರ್ 23 ರಿಂದ 27ರ ವರೆಗೆ ತಮಿಳ್ ನಾಡಿನ ಕುಟ್ಟಂಕುಳತ್ತೂರಿನಲ್ಲಿರುವ ಎಸ್.ಆರ್.ಎಂ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ. 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top