ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸ್ವಸ್ತಿಕ್‍ಶರ್ಮ ಯಕ್ಷಪ್ರತಿಭಾ ಪ್ರಶಸ್ತಿಗೆ ಆಯ್ಕೆ

Upayuktha
0

 


ಪುತ್ತೂರು: ಯಕ್ಷಗಾನಾಚಾರ್ಯ ಪಾರ್ತಿಸುಬ್ಬನ ತವರು ನೆಲ ಕುಂಬ್ಳೆಯ ಶೇಡಿಕಾವಿನಲ್ಲಿ ಡಿಸೆಂಬರ್ 18ರಂದು ನಡೆಯಲಿರುವ ಪ್ರಥಮ ಕಣಿಪುರ ಯಕ್ಷೋತ್ಸವದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸ್ವಸ್ತಿಕ್‍ಶರ್ಮ ಪಿ. ಯಕ್ಷಪ್ರತಿಭಾ ಪ್ರಶಸ್ತಿಗೆ  ಆಯ್ಕೆಯಾಗಿದ್ದಾರೆ. ಕುಂಬ್ಳೆ ಸೀಮೆಯ ಬಳ್ಳಂಬೆಟ್ಟು ಮೂಲದ ಖ್ಯಾತ ಪುಂಡುವೇಷಧಾರಿ ದಿ. ಶ್ರೀಧರಭಂಡಾರಿ ಸ್ಮರಣಾರ್ಥ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿಯು ತಲಾ ಐದು ಸಾವಿರ ರೂ ನಗದು ಮತ್ತು ಸ್ಮರಣಿಕೆ, ಸನ್ಮಾನಪತ್ರ, ಪಾರಿತೋಷಕವನ್ನೊಳಗೊಂಡಿದೆ. ಈತನು ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ಪಳ್ಳತ್ತಡ್ಕದ ಕೇಶವ ಪಿ ಮತ್ತು ದಿವ್ಯಾ ಪಿ ದಂಪತಿ ಪುತ್ರ. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top