ವಿಸಿಇಟಿ: ಸ್ವಯಂಪ್ರೇರಿತ ರಕ್ತದಾನ ಶಿಬಿರ

Upayuktha
0

ಪುತ್ತೂರು: ರಕ್ತಕ್ಕೆ ಪರ್ಯಾಯ ವ್ಯವಸ್ಥೆಯಿಲ್ಲ, ಇದನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ ಹಾಗಾಗಿ ಸುರಕ್ಷಿತ ರಕ್ತದಾನವನ್ನು ಸೇವೆ ಎಂದು ಪರಿಗಣಿಸಲಾಗುತ್ತದೆ ಎಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರಕ್ತ ಕೇಂದ್ರದ ವೈದ್ಯೆ ಡಾ.ಮಾರ್ಟಿನಾ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಘಟಕ, ಯೂತ್ ರೆಡ್-ಕ್ರಾಸ್ ಘಟಕ ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಮಾಡಿ ಮಾತಾಡಿದರು. ರಕ್ತದಾನದಿಂದ ಮೂರು ವ್ಯಕ್ತಿಗಳ ಜೀವ ಉಳಿಸಬಹುದು. ನೀಡಿದ ರಕ್ತವನ್ನು ಪರಿಷ್ಕರಿಸಿ ಕೆಂಪು ರಕ್ತಕಣ, ಬಿಳಿ ರಕ್ತಕಣ ಹಾಗೂ ಪ್ಲಾಸ್ಮಾ ಕಣಗಳಾಗಿ ಬೇರ್ಪಡಿಸಿ ರೋಗಿಗಳ ಆವಶ್ಯಕತೆಗೆ ತಕ್ಕಂತೆ ನೀಡಲಾಗುವುದು ಎಂದರು. ರಕ್ತದಾನದಂತಹ ಸಮಾಜಮುಖೀ ಕಾರ್ಯದಲ್ಲಿ ಪಾಲ್ಗೊಂಡವರೆಲ್ಲರೂ ಅಭಿನಂದನಾರ್ಹರು ಎಂದು ನುಡಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್ ಮಾತನಾಡಿ ರಕ್ತ ದಾನ ಮಹಾ ದಾನ ಮನುಕುಲದ ಜೀವ ಉಳಿಸುವ ಮಹತ್ಕಾರ್ಯ ಎಂದರು. ಆವಶ್ಯಕತೆಗೆ ತಕ್ಕಂತೆ ರಕ್ತ ಸಿಗದೇ ಇರುವ ಸಂದರ್ಭದಲ್ಲಿ ರಕ್ತದಾನ ಶಿಬಿರಗಳು ಆವಶ್ಯಕವಾಗುತ್ತದೆ. ಪ್ರತಿವರ್ಷ ಕಾಲೇಜಿನಲ್ಲಿ 3 ರಿಂದ 4 ಬಾರಿ ಇಂತಹ ಶಿಬಿರಗಳನ್ನು ಸಂಯೋಜಿಸಿ ಅರ್ಹರು ಸ್ವಯಂಪ್ರೇರಿತವಾಗಿ ರಕ್ತ ದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.


ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ಸ್ವಾಗತಿಸಿ ಯೂತ್ ರೆಡ್-ಕ್ರಾಸ್ ಘಟಕದ ಸಂಯೋಜಕ ಪ್ರೊ.ಅಭಿಷೇಕ್ ವಂದಿಸಿದರು. ವಿದ್ಯಾರ್ಥಿನಿ ಶ್ರೀನಿಧಿ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top