ಉಡುಪಿ: ಡಿ. 15 ರಂದು ಉದ್ಯೋಗ ಮೇಳ

Upayuktha
0

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.


ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.


ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top