ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Upayuktha
0


ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಕುಶಾಲನಗರ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ  ಪಿಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ಪ್ರಾಂಶುಪಾಲರು, ಫೀಲ್ಡ್ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,100/- ನ್ನು (ರೂಪಾಯಿ ಒಂದು ಸಾವಿರದ ನೂರು ಮಾತ್ರ) (ಎಸ್‌ಸಿ/ಎಸ್‌ಟಿ/ ಪ್ರವರ್ಗ-I ಅಭ್ಯರ್ಥಿಗಳು  ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ  ರೂ.550/-) ಚಲನ್/‌ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ  ಡಿ. ಡಿ. ಮುಖಾಂತರ ಪಾವತಿಸಿ ಪಡೆಯ ಬಹುದಾಗಿದೆ.


ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಜನವರಿ 31,  2023 ರ ಒಳಗೆ ಸಲ್ಲಿಸತಕ್ಕದ್ದು.

ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top