ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ 5ನೇ 'ಕೃಷಿಯಂತ್ರ ಮೇಳ - 2023' ಮತ್ತು 'ಕನಸಿನ ಮನೆ' ಇದರ ಪೂರ್ವಭಾವಿಯಾಗಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಡಿ. 13 ಮಂಗಳವಾರ, ಬೆಳಿಗ್ಗೆ 10:30 ಕ್ಕೆ ಸರಿಯಾಗಿ 'ರೈತರೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಕ್ಯಾಂಪ್ಕೋ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೆಚ್. ಎಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ವಿ.ವಿ.ಎಸ್ ಕಾರ್ಯದರ್ಶಿ ಡಾ. ಕೆ ಎಂ ಕೃಷ್ಣ ಭಟ್ ಪ್ರಸ್ತಾವನೆ ಮಾಡುವರು. ವಿ.ಸಿ.ಇ.ಟಿ ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ ಸಂವಾದ ನಿರ್ವಹಣೆ ಮಾಡುವರು. ಕಾರ್ಯಕ್ರಮದ ನಂತರ ಭೋಜನದ ವ್ಯವಸ್ಥೆ ಇರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ