ಮಂಗಳೂರು ವಿವಿ: ಕಾನೂನು ಪದವಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸೂಚನೆ

Upayuktha
0
ಮಂಗಳೂರು: ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಫೆಬ್ರವರಿ 2023ರಲ್ಲಿ ಅಂತಿಮವಾಗಿ ನಡೆಸಲಾಗುವುದು.

ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾಯ ಕಾಲೇಜುಗಳಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಫೆಬ್ರವರಿ, 2023 ರಲ್ಲಿ ನಡೆಸುವ ಪರೀಕ್ಷೆ ಕೊನೆಯ ಅವಕಾಶವಾಗಿದ್ದು ಮುಂದಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಯಾವುದೇ ವಿಷಯಕ್ಕೆ ಸಂಬಂಧಿಸಿ ಕಾನೂನು ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ, ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

Post a Comment

0 Comments
Post a Comment (0)
To Top