ಪದ್ಯಾಣ ಶಾಲಾ ವಾರ್ಷಿಕೋತ್ಸವ ಸಂಪನ್ನ

Upayuktha
0

ಬಂಟ್ವಾಳ: ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರದಿಂದ ಹಲವು ವರ್ಷಗಳ ಬಳಿಕ ಕರೋಪಾಡಿ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಕಿರಿಯ ಪ್ರಾಥಮಿಕ ಶಾಲೆ, ಪದ್ಯಾಣದಲ್ಲಿ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿತು.


ಸಭಾಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮೂಹ ಸಂಪನ್ಮೂಲ ಕೇಂದ್ರ ಕನ್ಯಾನದ ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಕೆ ಯವರು, ಸರಕಾರಿ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಶ್ಲಾಘನೀಯ. ಪುಟ್ಟ ಶಾಲೆಯಾದರೂ ಯಶಸ್ವೀ ಕಾರ್ಯಕ್ರಮ ನಡೆಯುತ್ತಿರುವುದು ಅಭಿನಂದನಾರ್ಹ, ಎಂದು ಅಭಿಪ್ರಾಯಪಟ್ಟರು.


ಶಾಲೆಯ ಸ್ಥಾಪಕ ಹಾಗೂ ನಿವೃತ್ತ ಮುಖ್ಯಪಾಧ್ಯಾಯ ತಿಮ್ಮಣ್ಣ ಭಟ್ ಪದ್ಯಾಣ ಉದ್ಘಾಟಕರಾಗಿ ಆಗಮಿಸಿ, ಕನ್ನಡ ಶಾಲೆಯನ್ನು ಪ್ರೀತಿಸುವುದು ,ಉಳಿಸುವುದು ಸಮಾಜದ ಕರ್ತವ್ಯ, ಎಂದು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ್ದ ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನ್ವರ್ ಕರೋಪಾಡಿ ಶಾಲೆಯ ಸಾಧನೆಗಳನ್ನು ಮೆಚ್ಚಿ, ಮುಂದೆ ಶಾಲೆಯ ಅಭಿವೃದ್ಧಿಗಾಗಿ ಸರಕಾರದಿಂದ ಸಿಗುವ ಅನುದಾನವನ್ನು ದೊರಕಿಸಿಕೊಡುವಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ, ಕೇರಳ ಕೇಂದ್ರೀಯ ವಿದ್ಯಾಲಯ ಪೆರಿಯ ಕಾಸರಗೋಡಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಪದ್ಯಾಣ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ದಿನೇಶ್ ಗಡಿಜಾಗೆ, ಕರೋಪಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಸನ್ನ ಪದ್ಯಾಣ ಹಾಗೂ ಶಶಾಂಕ್ ಭಟ್ ಉಪಸ್ಥಿತಿದ್ದರು.


ನಿವೃತ್ತ ಯೋಧ ಗೋವಿಂದ ಪ್ರಸಾದ್ ಪದ್ಯಾಣ, ಆಶಾ ಕಾರ್ಯಕರ್ತೆ ಶ್ರೀಮತಿ ಆಶಾಲತಾ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ದಂಪತಿ- ಶಿವಪ್ಪ ಗೌಡ ಹಾಗೂ ಶೋಭಾವತಿಯವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಶಾಲಾ ವಿದ್ಯಾರ್ಥಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಸಾಂಸ್ಕೃತಿಕ ವೈವಿಧ್ಯ ನಡೆಸಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕಿ ಸಾವಿತ್ರಿ ಸ್ವಾಗತಿಸಿ,ಸಹ ಶಿಕ್ಷಕಿ ವೀಣಾಕುಮಾರಿ ವಂದಿಸಿದರು. ಹಳೇ ವಿದ್ಯಾರ್ಥಿಗಳಾದ ಪ್ರತೀಕ್ಷಾ ಪದ್ಯಾಣ ಹಾಗೂ ಖದೀಜತ್ ತಸ್ಲೀಮಾ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top