ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಣ್ಣು ದಿನಾಚರಣೆ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಗಳ ಸಹಯೋಗದೊಂದಿಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸೋಮವಾರ ವಿಶ್ವ ಮಣ್ಣು ದಿನಾಚರಣೆ ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ವಿವಿ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಂಯೋಜಕ ಡಾ.ಕುಮಾರಸ್ವಾಮಿ ಎಂ ಅವರು ಮಾತನಾಡಿ, ನಮ್ಮ ಮಣ್ಣನ್ನು ಉಳಿಸುವ ದೊಡ್ಡದೊಂದು ಕಾರ್ಯ ಆಗಬೇಕಿದೆ. ನಮ್ಮ ಮನೆಗಳಲ್ಲಿ ತಾರಸಿ ಕಾಡನ್ನು ಬೆಳೆಸುವುದು ಈಗಿನ ಅಗತ್ಯ ಮತ್ತು ಅನಿವಾರ್ಯತೆ, ಎಂದು ಅಭಿಪ್ರಾಯಪಟ್ಟರು. ಪ್ರಭಾರ ಪ್ರಾಂಶುಪಾಲ ಡಾ. ಹರೀಶ ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮಣ್ಣು ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ದರಾಜು ಸ್ವಾಗತಿಸಿದರು. ದ್ವಿತೀಯ ಬಿಎಸ್ಸಿಯ ‌ಸ್ವಾತಿ ವಂದಿಸಿದರು. ದ್ವಿತೀಯ ಬಿಎಸ್ಸಿಯ ಮೇಘನ ಕಾರ್ಯಕ್ರಮ ನಿರೂಪಿಸಿದರು. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಕಾವ್ಯ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top