ಪುತ್ತೂರು : ಗಣರಾಜ್ಯೋತ್ಸವ ಎಂದರೆ ಉತ್ಸವ ಎಂದರ್ಥ. ಪ್ರಜಾಪ್ರಭುತ್ವದ ಹಿನ್ನೆಲೆ, ಸಂವಿಧಾನದ ನೀತಿ ನಿಯಮಗಳನ್ನು ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು, ಪ್ರಜೆಗಳಿಗೆ ಗಣರಾಜ್ಯೋತ್ಸವವು ತಿಳಿಸುತ್ತದೆ. ಭಾರತದ ಇತಿಹಾಸ ಪುಟಗಳನ್ನು ತೆರೆದು ನೋಡಿದಾಗ ಭಾರತದ ಆರ್ಥಿಕ ವ್ಯವಸ್ಥೆಯು ಹಿಂದುಳಿದಿತ್ತು. ಆದರೆ ಈಗ ವಿಶ್ವದಲ್ಲೇ ಭಾರತ ಅತಿ ಹೆಚ್ಚು ಆರ್ಥಿಕವಾಗಿ ಬೆಳೆದು ನಿಂತಿದೆ. ಅಲ್ಲದೆ ಭಾರತದ ಅಭಿವೃದ್ಧಿಗಾಗಿ ಪ್ರಕೃತಿಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಗೊಳಿಸುವುದು ನಮ್ಮ ಕರ್ತವ್ಯ. ಒಳ್ಳೆಯ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು. ಹಾಗೇ ಭಾರತದ ಪ್ರಜೆಗಳಾದ ನಾವು ನಮ್ಮಜವಾಬ್ದಾರಿಯನ್ನು ಹೊತ್ತು ದೇಶಕ್ಕೆ ಮಾದರಿಯಾಗಬೇಕೆಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.
ಅವರು ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ),ವಿವೇಕಾನಂದ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ) ಪುತ್ತೂರು. ಇದರ ಸಹಭಾಗಿತ್ವದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ, ಪದವಿ ಪೂರ್ವ ಕಾಲೇಜು ಮತ್ತು ಸಿಬಿಎಸ್ಇ ಶಾಲೆಯ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು, ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು , ಎನ್‍ಎಸ್‍ಎಸ್ , ಎನ್ ಸಿ ಸಿ , ರೋವರ್ಸ್ ಮತ್ತು ರೇಂಜರ್ಸ್ ಮತ್ತು ರೆಡ್‍ಕ್ರಾಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಕಾರ್ಯಕ್ರಮವನ್ನು ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ