ಮೂಡುಬಿದಿರೆ: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕದಲ್ಲಿ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದು ಆಳ್ವಾಸ್ ಕಾಲೇಜು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನರಾಮ್ ಸುಳ್ಯ ಮಾರ್ಗದರ್ಶನದಲ್ಲಿ ಭುವನ್ ಮಣಿಪಾಲ್ ನಿರ್ದೇಶಿಸಿದ ಹಾಗೂ ಉಜ್ವಲ್ ಯುವಿ ವಿನ್ಯಾಸ ಮಾಡಿದ ‘ದುರ್ಯೋಧ’ನಾಟಕ ಪ್ರಥಮ ಬಹುಮಾನ ಪಡೆಯಿತು. ಸುರೇಶ್ ಕುಮಾರ್ ನಿರ್ದೇಶನದ ಜಾನಪದ ನೃತ್ಯವು ದ್ವಿತೀಯ ಸ್ಥಾನ ಪಡೆಯಿತು. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿತ್ತು.
ಸಾಂಸ್ಕೃತಿಕ ಪ್ರತಿಭೆಗಳಿಗೆ ದತ್ತು ಯೋಜನೆ ಅಡಿಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ವಿಜೇತರನ್ನು ಅಭಿನಂದಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರವು 11 ಬಾರಿ ರಾಷ್ಟ್ರೀಯ ರಂಗ ಪುರಸ್ಕಾರಕ್ಕೆ ಪಾತ್ರವಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ