ಕಾರವಾರ: ಬೂತ್ ಸಮಿತಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಅಂಕೋಲಾ ಮಂಡಲದಿಂದ ಬೆಲೇಕೇರಿ ಸೀಬರ್ಡ್ ಕಾಲೋನಿ, ಅಜ್ಜಿಕಟ್ಟಾ, ಕೇಣಿ ಹಾಗೂ ಶೆಟಗೇರಿ ಗ್ರಾಮದ ವ್ಯಾಪ್ತಿಯ ಕಣಗಿಲ ಹಾಗೂ ಹಡವ ಬೂತ್ ಗಳಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ನೆರವೇರಿಸಲಾಯಿತು.
ಕಾರವಾರ ಶಾಸಕಿ ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಅಭಿಯಾನ ಸಲುವಾಗಿ ಹಲವು ಚಟುವಟಿಕೆ ನಡೆಸಲಾಯಿತು. ಬೂತ್‌ಗಳಲ್ಲಿ ಸಮಿತಿಯ ಕಾರ್ಯವೈಖರಿಯನ್ನು ಬೂತ್ ತಂಡದ ಸದಸ್ಯರ ಮಾಹಿತಿ ಪಡೆದು ಪರಿಶೀಲಿಸಲಾಯಿತು. ಪಂಚರತ್ನ ಸಮಿತಿಯನ್ನು ಪರಿಶೀಲಿಸಿ ರಚನೆ, ಪೇಜ್ ಪ್ರಮುಖರ ನೇಮಕ, ವಾಟ್ಸಾಪ್ ಗ್ರೂಪ್‌ಗಳ ರಚನೆ ಮಾಡಲಾಯಿತು.
ಪಕ್ಷ ಸಂಘಟನೆಗೆ ನೀಡಿದ ಯೋಜನಾ ಕಾರ್ಯಗಳನ್ನು ಜಾರಿಗೊಳಿಸಿ ಯುದ್ಧೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಲೋಕಕಲ್ಯಾಣ ಕಾರ್ಯ ಮಾಡುತ್ತಿದೆ. ಜನ ಹಿತಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ನಾವೆಲ್ಲರೂ ಸೇರಿ ಬಲಪಡಿಸಬೇಕಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಜನರ ಏಳಿಗೆಗೆ ಸರ್ಕಾರ ರೂಪಿಸಿ ಜಾರಿಗೆ ತಂದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪಿಸಬೇಕು. ಮಾಹಿತಿಯನ್ನು ಹಂಚಿಕೊಂಡು ಯೋಜನೆ ತಲುಪುವಂತೆ ಬೂತ್ ಸಮಿತಿ ಕೆಲಸ ಮಾಡಬೇಕು ಎಂದು ಶಾಸಕಿ ರೂಪಾಲಿ ನಾಯ್ಕ್ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಂಕೋಲಾ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ