
ಮಂಗಳೂರು: ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ.ಗಳು ಹಾಗೂ ಜಿಲ್ಲಾ ಮಟ್ಟದ ಆರೋಗ್ಯ ಸಂಯೋಜಕರಿಗೆ 15,000 ರೂ.ಗಳ ಗೌರವಧನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಯವರ ಕಚೇರಿಯಿಂದ ಅರ್ಜಿ ಪಡೆದು ಇದೇ ಜ.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2451269 ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ