ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಪರಿಸರ ವಿಜ್ಞಾನ ವಿಷಯ (ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗ) ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ವ್ಯವಹಾರ ಆಡಳಿತ ವಿಷಯ ಮತ್ತು ಸಮಾಜ ಕಾರ್ಯ ವಿಷಯ, ಸೇಂಟ್‌ ಅಲೋಷಿಯಸ್‌ ಕಾಲೇಜು (ಸ್ವಾಯತ್ತ), ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರ ಮತ್ತು ರಸಾಯನಶಾಸ್ತ್ರ ವಿಷಯ, CMFRI, ಕೊಚ್ಚಿನ್‌ ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದಲ್ಲಿ 2022-23 ನೇ ಸಾಲಿನಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಇವರಿಂದ ರೂ. 1,100/- ನ್ನು (ಎಸ್‌ಸಿ/ಎಸ್‌ಟಿ/ ಪ್ರವರ್ಗ-I ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.550/-) ಚಲನ್/‌ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ. ಡಿ. ಮುಖಾಂತರ ಪಾವತಿಸಿ ಪಡೆಯಬಹುದಾಗಿದೆ.


ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ದಿನಾಂಕ 07.02.2023 ರ ಒಳಗೆ ಸಲ್ಲಿಸತಕ್ಕದ್ದು. ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top