ಅಯೋಧ್ಯ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನದಡಿ 3 ಮನೆಗಳ ನಿರ್ಮಾಣ: ಪೇಜಾವರ ಶ್ರೀಗಳಿಂದ ಭೂಮಿ ಪೂಜೆ

Upayuktha
0

ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರೊಂದಿಗೆ ಶಾಸಕ ರಘುಪತಿ ಭಟ್ ಶಿಲಾನ್ಯಾಸ

ಮೂರೂ ಮನೆಗಳಿಗೆ ಪೇಜಾವರ ಮಠದಿಂದ ತಲಾ 2.5 ಲಕ್ಷ ರೂ ನೆರವು 



ಉಡುಪಿ: "ಅಯೋಧ್ಯ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನ- 2023" ಅಭಿಯಾನದಡಿ ಹೇರೂರು ಜಲಜ ಶೆಡ್ತಿ ಅವರಿಗೆ ಮನೆ ನಿರ್ಮಿಸಿ ಕೊಡಲಾಗುತ್ತಿದ್ದು, ಗುರುವಾರ (ಜ.26) ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರೊಂದಿಗೆ ಶಾಸಕ ರಘುಪತಿ ಭಟ್ ಅವರು ಮನೆಯ ಶಿಲಾನ್ಯಾಸವನ್ನು  ನೆರವೇರಿಸಿದರು.

ಈ ಅಭಿಯಾನದಡಿ ಕಲ್ಯಾಣಪುರದಲ್ಲಿ ಗಿರಿಜಾ ಪೂಜಾರ್ತಿ, ಹೇರೂರಿನಲ್ಲಿ ಜಲಜ ಶೆಡ್ತಿ ಮತ್ತು ಕುಂಜಿಬೆಟ್ಟುವಿನಲ್ಲಿ ಪ್ರತಿಮಾ ಅವರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ.

ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ 2024 ಜನವರಿ ವೇಳೆಗೆ ಪೂರ್ಣಗೊಂಡು, ಅಯೋಧ್ಯಾಧಿಪತಿ ಶ್ರೀರಾಮಚಂದ್ರರ ಭವ್ಯ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪ್ರಸ್ತುತ ಇರುವ ಈ ಒಂದು ವರ್ಷದ ಅವಧಿಯಲ್ಲಿ ದೇಶದಾದ್ಯಂತ ರಾಮ ರಾಜ್ಯದ ನಿರ್ಮಾಣದ ಕನಸಿನ ನೆಲೆಯಲ್ಲಿ ವ್ಯಕ್ತಿಗತವಾಗಿ ಹಾಗೂ ಸಂಘ ಸಂಸ್ಥೆಗಳು ಸೇರಿ ಒಂದಷ್ಟು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತಾಗಬೇಕು ಎನ್ನುವ ಆಶಯದ ಹಿನ್ನೆಲೆಯಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟಿಗಳು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು "ಅಯೋಧ್ಯ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನ - 2023" ಸಂಯೋಜಿಸಿರುತ್ತಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ವಾಸುದೇವ ಭಟ್ ಪೆರಂಪಳ್ಳಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ ಸ್ಥಳೀಯರಾದ ಸದಾನಂದ ಪೂಜಾರಿ, ಅಶೋಕ್ ಹೇರೂರು, ಮೀರಾ ಸದಾನಂದ ಪೂಜಾರಿ, ಹೇಮಾ ಅಶೋಕ್, ಗಿರೀಶ್ ಅಡಿಗ, ಉದಯ ಮರಕಾಲ, ಆನಂದ, ರೇವತಿ, ಗಣೇಶ್ ನಾಯಕ್ ಶಿರಿಯಾರ, ಸುದರ್ಶನ್, ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



Post a Comment

0 Comments
Post a Comment (0)
Advt Slider:
To Top