ಬೆಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆ, ಆರ್ಕಿಡ್ಸ್ ಅಂತರರಾಷ್ಟ್ರೀಯ ಶಾಲೆ ಮೆಜೆಸ್ಟಿಕ್ ಶಾಖೆಯ ಸಹಯೋಗದೊಂದಿಗೆ ಕಬ್ಬನ್ ಪಾರ್ಕ್ ನ ಕಿಂಗ್ಸ್ ಲೇನ್ ಆವರಣದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಯಿತು.
ಶಾಲೆಯ 30 ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಎಚ್ಚರಿಕೆಯ ಸಂದೇಶಗಳ ಬಗ್ಗೆ ಜಾಗೃತಿ ಮೂಡಿಸಲು ಫಲಕಗಳನ್ನು ಹಿಡಿದು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಕಬ್ಬನ್ ಪಾರ್ಕ್ ಕಿಂಗ್ಸ್ ಲೇನ್ ನಿಂದ ಮಗ್ರತ್ ರಸ್ತೆಯ ಸುಲ್ಲಿವಾನ್ ಪೊಲೀಸ್ ಹಾಕಿ ಮೈದಾನದವರೆಗೆ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಮೆಜೆಸ್ಟಿಕ್ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪಾಂಡುರಂಗಯ್ಯ ರ‍್ಯಾಲಿಯಲ್ಲಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಡಾ.ಎಂ. ಎ.ಸಲೀಂ, ಬೆಂಗಳೂರು ನಗರ ಸಂಚಾರ ಪೊಲೀಸ್ ಆಯುಕ್ತ, ಸಾರಿಗೆ ಆಯುಕ್ತ ಸಿದ್ದರಾಮಪ್ಪ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ