ನ್ಯಾಯಶಾಸ್ತ್ರ ಭಾಷಣ: ರಾಷ್ಟ್ರಮಟ್ಟಕ್ಕೆ ಮೈಸೂರಿನ ಪ್ರಣವ ಆಚಾರ್ಯ ಆಯ್ಕೆ

Upayuktha
0



ಮೈಸೂರು: ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಮೈಸೂರಿನ ಸೋಸಲೆ ವ್ಯಾಸರಾಜರ ಮಠದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿ ಪ್ರಣವ ಆಚಾರ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ನ್ಯಾಯಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಣವ ಆಚಾರ್ಯ, ವಾರಣಾಸಿಯ ಬನಾರಸ್  ಹಿಂದು ವಿವಿಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಶಾಸ್ತ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ ಎಂದು ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ. ಪಿ. ಮಧುಸೂದನಾಚಾರ್ಯ ತಿಳಿಸಿದ್ದಾರೆ.


ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದ ಮಕ್ಕಳು ಹಲವು ಬಹುಮಾನ ಗಳಿಸಿದ್ದಾರೆ. ಸಾಂಖ್ಯ-ಯೋಗಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ವಿ.ಸೌಮಿತ್ರಿ ಆಚಾರ್ಯ (ದ್ವಿ), ವ್ಯಾಕರಣ ಭಾಷಣ ಸ್ಪರ್ಧೆಯಲ್ಲಿ ಸರ್ವಜ್ಞ (ತೃ), ಕಾವ್ಯ ಶಲಾಕಾ ಸ್ಪರ್ಧೆಯಲ್ಲಿ ವಿಶ್ವಜ್ಞ (ತೃ) ಸ್ಥಾನ ಪಡೆದಿದ್ದಾರೆ.


ವಿಜೇತ ವಿದ್ಯಾರ್ಥಿಗಳಿಗೆ ಖ್ಯಾತ ತರ್ಕ ವಿದ್ವಾಂಸ ದೇವದತ್ತ ಪಾಟೀಲ, ಸಂಸ್ಕೃತ ವಿವಿ ಕುಲಪತಿ ಪ್ರೊ. ಗಿರೀಶಚಂದ್ರ, ಕುಲಸಚಿವ ಪ್ರೊ. ವೀರನಾರಾಯಣ ಪಾಂಡುರಂಗಿ ಬಹುಮಾನ ವಿತರಿಸಿದರು. ಪ್ರಾಚಾರ್ಯ ಡಾ. ಶ್ರೀನಿಧಿ ಹಾಜರಿದ್ದರು. ರಾಜ್ಯದ ವಿವಿಧ ಭಾಗದ 25 ಗುರುಕುಲ ಮತ್ತು ವಿದ್ಯಾಪೀಠಗಳ 300 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top