ಐತಿಹಾಸಿಕ ಪರಂಪರೆಯನ್ನು ಉಳಿಸಿದರೆ ಮಾತ್ರ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ: ಡಾ. ದಿವಾಕರ್ ಕೆ.

Upayuktha
0

 


ಉಜಿರೆ : ನಮ್ಮ ಪರಂಪರೆ ಶ್ರೇಷ್ಠ ಇತಿಹಾಸದ ಸಂರಕ್ಷಣೆ ಅತ್ಯಗತ್ಯ. ವಿದ್ಯಾರ್ಥಿಗಳು ಈಗಿನಿಂದಲೇ ಈ ದಿಶೆಯಲ್ಲಿ ಜಾಗೃತರಾಗಿರಬೇಕೆಂದು ಮುಖ್ಯ ಅತಿಥಿಗಳಾದ ಡಾ. ದಿವಾಕರ್ ಕೆ ರವರು ತಿಳಿಸಿದರು.


ಇತ್ತೀಚೆಗೆ ಉಜಿರೆ ಎಸ್ ಡಿ ಎಂ. ಪದವಿ ಕಾಲೇಜಿನಲ್ಲಿ "ಐತಿಹಾಸಿಕ ಪರಂಪರೆ ಉಳಿಸಿ" ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆರವೇರಿತು. ಇದರ ಅಭ್ಯಾಗತರಾಗಿ ಆಗಮಿಸಿದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವಾಕರ್ ಕೆ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಎ. ಜಯಕುಮಾರ್ ಶೆಟ್ಟಿ ರವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ಭಾರತೀಯರ ಪರಂಪರೆ, ಅದರಲ್ಲಿರುವ ವೈಜ್ಞಾನಿಕ ಸತ್ಯ, ಸ್ಥಳೀಯ ಇತಿಹಾಸದ ಅಧ್ಯಯನದ ಅವಶ್ಯಕತೆ ಮುಂತಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.


ಏಳು ದಿನಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಆ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿ ಪ್ರತಿನಿಧಿ ಕು. ಗೀತಾ ಏಳು ದಿನಗಳ ವಿವಿಧ ಕಾರ್ಯಕ್ರಮಗಳ ಕುರಿತು ವರದಿ ವಾಚಿಸಿದರು. ಸಹಾಯಕ ಪ್ರಾಧ್ಯಾಪಕಿ ಅಭಿಜ್ಞಾ ಉಪಾಧ್ಯಾಯ ಸ್ವಾಗತಿಸಿ ವಿದ್ಯಾರ್ಥಿ ಪ್ರತಿನಿಧಿ ಮನೋಜ್ ಇವರು ವಂದಿಸಿದರು. ತೇಜಸ್ವಿ ಹಾಗೂ ರಿತೇಶ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top