ನಿಟ್ಟೆಯಲ್ಲಿ ಡಾ.ಭಾಮಿ ಶೆಣೈ ಅವರೊಂದಿಗೆ ಸಂವಾದ ಕಾರ್ಯಕ್ರಮ

Upayuktha
0

 



ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜ.೩ ರಂದು 'ಹಲವು ಸಮಾಜಮುಖೀ ಕೆಲಸಗಳನ್ನು ಹೇಗೆ ಮಾಡಬಹುದು' ಎಂಬ ವಿ‌ಷಯದ ಕುರಿತು ಸಂವಾದ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಮೈಸೂರು ಗ್ರಾಹಕ ಪರಿಷತ್ ನ ಸ್ಥಾಪಕ ಡಾ.ಭಾಮೀ ಶಣೈ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಸಂಸ್ಥೆಯ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ಸಂಸ್ಥೆಯ ವತಿಯಿಂದ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳನ್ನೊಳಗೊಂಡು ಯಾವ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬಹುದು ಎಂಬುದರ ಬಗೆಗೆ ಸಂಕ್ಷಿಪ್ತವಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ ಎಂ.ಸಿ.ಎ ವಿದ್ಯಾರ್ಥಿಗಳು ಹಾಗೂ ನಿಟ್ಟೆ ತಾಂತ್ರಿಕ ಕಾಲೇಜಿನ ಬೋಧಕವರ್ಗದವರು ಮಾಡಿರುವ ಹಾಗೂ ಮುಂದೆ ಮಾಡಬಹುದಾದ ಸಮಾಜಮುಖಿ ಕೆಲಸಗಳ ಬಗೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ನಿಟ್ಟೆ ತಾಂತ್ರಿಕ ಕಾಲೇಜಿನ ಎಂ.ಸಿ.ಎ ವಿಭಾಗದ ಮುಖ್ಯಸ್ಥ ಡಾ.ಸುರೇಂದ್ರ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top