ಮಂಗಳೂರು: 2023ರ ಫೆಬ್ರವರಿ 3, 4 ಮತ್ತು 5ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಮಂಟಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಮ್ಮೇಳನದ ಆಶಯವನ್ನು ಬಿಂಬಿಸುವ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮ್ಮೇಳನ ಸಂಯೋಜನಾ ಸಮಿತಿಯ ಗೌರವಾಧ್ಯಕ್ಷರಾದ ಡಿ. ಹರ್ಷೇಂದ್ರ ಕುಮಾರ್ ಜ.18ರ ಬುಧವಾರ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ಉಜಿರೆಯಲ್ಲಿ ಜರಗುವ ಸಮ್ಮೇಳನಕ್ಕೆ ಅತಿ ಮಹತ್ವವಿದೆ. ಜನರ ನಿರೀಕ್ಷೆಗೆ ಅನುಗುಣವಾಗಿ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜರಗಲಿದೆ. ಆ ನಿಟ್ಟಿನಲ್ಲಿ ತಯಾರಿ ನಡೆಯಬೇಕು ಜೊತೆಗೆ ಅರ್ಥಪೂರ್ಣವಾಗಿ ಕಾರ್ಯಕ್ರಮಗಳು ಸಂಯೋಜನೆಗೊಳ್ಳಲಿ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ನಿವೃತ್ತ ಪ್ರಾಂಶುಪಾಲರಾದ ಕೃಷ್ಣಪ್ಪ ಪೂಜಾರಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಕಾರ್ಯಾಲಯದ ಸಂಚಾಲಕರಾದ ಹರ್ಷಕುಮಾರ್ ಉಜಿರೆ ಮತ್ತು ಲಾಂಛನ ಕಲಾವಿದರಾದ ವಿ.ಕೆ ವಿಟ್ಲ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ