ಉಡುಪಿ: ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರಕಟ

Upayuktha
0

 


ಉಡುಪಿ : ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ತಾಲೂಕು ನಂದಳಿಕೆ ಅಬ್ಬನಡ್ಕದ ಶ್ರೀ ದುರ್ಗಾ ಪರಮೇಶ್ವರಿ ಯುವಕ ಮಂಡಲವು (ರಿ) ಆಯ್ಕೆಯಾಗಿರುತ್ತದೆ.


ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಅಂತಿಮ ಸುತ್ತಿನಲ್ಲಿ ಮೇಲ್ಕಂಡ ಯುವಕ ಮಂಡಲವು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸಪತ್ರವನ್ನು ಒಳಗೊಂಡಿದ್ದು, ಜನವರಿ ತಿಂಗಳಲ್ಲಿ ನಡೆಯುವ ಜಿಲ್ಲಾ ನಾಯಕತ್ವ ಹಾಗೂ ಸಮುದಾಯ ಬೆಳವಣಿಗೆ ಶಿಬಿರ/ ಯುವ ಸಮಾವೇಶದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top