ಉಸ್ತುವಾರಿ ಸಚಿವರಿಂದ ಸೋಗಾನೆ ವಿಮಾನ ನಿಲ್ದಾಣ ಭೇಟಿ - ವೀಕ್ಷಣೆ

Chandrashekhara Kulamarva
0

ಶಿವಮೊಗ್ಗ: ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.


ಮೊದಲಿಗೆ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿದರು. ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.


ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಕಟ್ಟಡಕ್ಕೆ ಭೇಟಿ ನೀಡಿ ಪರಿವೀಕ್ಷಿಸಿದರು. ನಂತರ ರನ್ ವೇ ಯನ್ನು ವೀಕ್ಷಿಸಿದರು.


ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್, ಕೆಎಸ್‍ಐಐಡಿಸಿ ತಾಂತ್ರಿಕ ಅಧಿಕಾರಿ ರಕ್ಷಿತ್ ಇತರೆ ಅಧಿಕಾರಿಗಳು ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top