ಮಂಗಳೂರು : ನಗರದ ಅನೇಕ ಕಡೆಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ ಹಾಗೂ ಹೊಸ ಪಾರ್ಕ್ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದೆ. ಹಸಿರು ಉಳಿಸಿಕೊಂಡು ನಗರದ ಅಭಿವೃದ್ಧಿಗೆ ಚಿಂತನೆ ನಡೆಸುತ್ತಿದ್ದು ಗ್ರೀನ್ ಮಂಗಳೂರು ಪರಿಕಲ್ಪನೆಗೆ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಆರ್.ಬಿ ಲೇಔಟ್ ನಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಮೂಡದಿಂದ ನಗರದಲ್ಲಿರುವ ಪಾರ್ಕ್ ಗಳ ಅಭಿವೃದ್ಧಿ ಹಾಗೂ ಹೊಸದಾಗಿ ಪಾರ್ಕ್ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ನಗರದ ಆಯ್ದ ಭಾಗಗಳಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದರು.
ನಗರದ ಬೆಳವಣಿಗೆಯಂತೆ ಹಸಿರನ್ನು ಉಳಿಸುವ ದೃಷ್ಟಿಯಿಂದ ರೂಪುಗೊಂಡ ಗ್ರೀನ್ ಮಂಗಳೂರು ಪರಿಕಲ್ಪನೆಯನ್ನು ಸಾಕಾರಗೊಳಿಸಿ ಉದ್ಯಾನವನಗಳ ಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೇಳಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ಮಾತನಾಡಿ, ಶಾಸಕರ ಬೇಡಿಕೆಯಂತೆ ಪಾರ್ಕ್ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ಈಗಾಗಲೇ ಕೆಲವೊಂದು ಕಾಮಗಾರಿಗಳು ನಡೆಯುತ್ತಿದೆ. ಮರೋಳಿ ಆರ್.ಬಿ ಲೇಔಟ್ ಪಾರ್ಕ್ ಅಭಿವೃದ್ಧಿಗೆ 25 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್ ಮರೋಳಿ, ರಾಘು ಮರೋಳಿ, ಅರುಣ್ ಶೆಟ್ಟಿ, ಸರಳ ಮಾಲತಿ, ಬೋಜ ಅಮೀನ್, ಅನಿತಾ, ದೀಪಕ್ ಮರೋಳಿ, ಲೋಕೇಶ್ ಬೋಳಾರ್, ರವಿರಾಜ್ ಶೆಟ್ಟಿ, ಶಕುಂತಲಾ, ಮೋನಪ್ಪ ಗೌಡ, ಸುಂದರ್ ಶೆಟ್ಟಿ, ಕುಸುಮಾಧರ್, ಸುರೇಶ್ ಬೇಕಲ್, ಹರಿಣಿ, ಸುಲಕ್ಷ್ಮನ್ ರೈ, ಕೃಷ್ಣಪ್ಪಗೌಡ, ಮಟಿ ಕೃಷ್ಣರಾವ್, ಕಿಶೋರ್, ರೇಣುಕಾ, ಸಂಜಯ್, ಸಮತ್, ವಿಠಲ್ ಪ್ರಭು, ದಯಾನಂದ್ ನಾಯಕ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ