ಉಡುಪಿ : ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದರೂ ಸಹ ಇಂದಿಗೂ ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಹೆಣ್ಣುಮಕ್ಕಳು ಜಾಗೃತರಾದಾಗ ಮಾತ್ರ ಅವರ ಮೇಲಿನ ಶೋಷಣೆಗಳು ಕಡಿಮೆಯಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದರು.
ಅವರು ಇಂದು ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್ ಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚೈಲ್ಡ್ ಲೈನ್ -1098 ಮತ್ತು ರೋಟರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕಾರ ಮತ್ತು ಕೋರ್ಟುಗಳು ಫೋಕ್ಸೋ ಕಾಯಿದೆಯ ಮೂಲಕ ದೌರ್ಜನ್ಯ ಎಸಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿದರೂ ಹೆತ್ತವರು, ಶಿಕ್ಷಕರು ಮತ್ತು ಸಮಾಜ ಜಾಗೃತರಾಗಿ ಸಂಬಂಧಪಟ್ಟವರಿಗೆ ತಿಳಿಸಿ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯವನ್ನು ಕಡಿಮೆ ಮಾಡುವಲ್ಲಿ ತಮ್ಮಜವಾಬ್ದಾರಿಯನ್ನುನಿರ್ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನಜಾಗೃತಿ ಮೂಡಿಸಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆ ಮತ್ತು ದೌರ್ಜನ್ಯವನ್ನು ತಡೆಗಟ್ಟುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಬೈಕ್ ರೈಡಿಂಗ್ ಸಾಹಸ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದರು. ಅಪೂರ್ವ ಬೈಕಾಡಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ನಾಯ್ಕ, ಬ್ರಹ್ಮಾವರ ಪೊಲೀಸ್ ಠಾಣೆಯ ಮುಕ್ತಾಬಾಯಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಮಕೃಷ್ಣ, ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ನಾರಾಯಣಬಿ.ಕೆ., ರೋ.ಚಂದ್ರಶೇಖರ ಅಡಿಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಚೈಲ್ಡ್ ಲೈನ್ ನಿರ್ದೇಶಕ ರೊ.ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ರೋಟರಿಯ ಅಧ್ಯಕ್ಷ ರೋ.ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿದರು. ಶಾಲಾ ಉಪಪ್ರಾಂಶುಪಾಲ ಬಿ.ಟಿ.ನಾಯ್ಕ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ