ಗೋವಾದಲ್ಲಿ ಕನ್ನಡ ಭವನ ನಿರ್ಮಾಣ: ಸರ್ಕಾರದ ವತಿಯಿಂದಲೇ ಜಾಗ ಖರೀದಿಸಲು ಸಿಎಂ ಬೊಮ್ಮಾಯಿಗೆ ಮನವಿ

Upayuktha
0

 


ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರ ಜಾಗ ನೀಡುವ ಕುರಿತಂತೆ ಯಾವುದೇ ಸಕಾರಾತ್ಮಕ ಉತ್ತರ ಬರುತ್ತಿಲ್ಲ. ಇದರಿಂದಾಗಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ವತಿಯಿಂದಲೇ ಗೋವಾದಲ್ಲಿ ಸೂಕ್ತ ಜಾಗ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ದಣ್ಣ ಮೇಟಿ ಇವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದರು.


ಹಾವೇರಿಯಲ್ಲಿ ನಡೆದ 86 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ವೇದಿಕೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಣ್ಣ ಮೇಟಿ ಈ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಉಪಸ್ಥಿತರಿದ್ದರು.


ಗೋವಾ ರಾಜ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಲಕ್ಷಾಂತರ ಕನ್ನಡಿಗರು ನೆಲೆಸಿದ್ದಾರೆ. ಇಲ್ಲಿ ಹಲವು ಕನ್ನಡ ಸಂಘಟನೆಗಳಿವೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಗೋವಾ ಕನ್ನಡಿಗರ ಬಹು ವರ್ಷಗಳ ಬೇಡಿಕೆಯಾಗಿದೆ. ಗೋವಾದ ನಮ್ಮ ಕನ್ನಡ ಸಂಘಟನೆಗಳ ನಿಯೋಗ ತಮ್ಮನ್ನು ಭೇಟಿ ಮಾಡಿ ಕನ್ನಡ ಭವನದ ಕುರಿತು ಮನವಿ ಮಾಡಿದ್ದ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ ಘೋಷಿಸಿದ್ದೀರಿ. ಇದಕ್ಕಾಗಿ ನಾವು ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇವೆ. ಇಷ್ಟೇ ಅಲ್ಲದೆ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಾವು ಈಗಾಗಲೇ ಹಣವನ್ನು ಕೂಡ ಮಂಜೂರು ಮಾಡಿದ್ದೀರಿ. ಆದರೆ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದ ವತಿಯಿಂದ ಜಾಗ ನೀಡುವ ಕುರಿತು ಯಾವುದೇ ಸಕಾರಾತ್ಮಕ ಉತ್ತರ ಬರುತ್ತಿಲ್ಲ ಎಂದು ಡಾ. ಸಿದ್ದಣ್ಣ ಮೇಟಿ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top