ಪಣಜಿ: ಗೋವಾ ರಾಜ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಪ್ರಕಾಶ ಭಟ್ ರವರನ್ನು ಹಾವೇರಿಯಲ್ಲಿ ನಡೆದ 86 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೂರು ಸಾವಿರ ಮಠ ಹುಬ್ಬಳ್ಳಿಯ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಜಿ, ಬೆಂಗಳೂರಿನ ಇಸ್ರೋ ಹಿರಿಯ ವಿಜ್ಞಾನಿ ಡಾ. ಕಿರಣ್ ಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ರವರು ಪತ್ರಕರ್ತ ಪ್ರಕಾಶ್ ಭಟ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮೊಳೆಮನೆಯವರಾದ ಪ್ರಕಾಶ್ ಭಟ್, ಕಳೆದ ಹಲವು ವರ್ಷಗಳಿಂದ ಗೋವಾ ರಾಜ್ಯ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಗೋವಾದ ಕನ್ನಡಪರ ಸಂಘಟನೆಗಳ ಹಾಗೂ ಕನ್ನಡಿಗರ ಸುದ್ದಿ ಸಮಾಚಾರಗಳನ್ನು ಕರ್ನಾಟಕಕ್ಕೆ ತಲುಪಿಸುವ ಮೂಲಕ ಹೊರ ನಾಡ ಗೋವಾದಲ್ಲಿ ಕನ್ನಡ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಈ ಸೇವೆಯನ್ನು ಗುರುತಿಸಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ