ಉಜಿರೆ : ಭಾರತದ ದೇಶದ ಬ್ಯಾಂಕಿಗ್ ಮತ್ತು ಇತರ ಸಂಸ್ಥೆಗಳ ಲಾಭದ ಶೇ.0.5 ರಷ್ಟನ್ನು ಸಮಾಜಮುಖಿ ಕೆಲಸಗಳಿಗೆ ಮೀಸಲಿಡಲಾಗಿದೆ. ಕೆನರಾ ಬ್ಯಾಂಕ್‌ನವರು ಸೆಲ್ಕೊ ಜೊತೆಯಲ್ಲಿ ಸೇರಿ ವಿದ್ಯಾರ್ಥಿಗಳ ಬಾಳಿಗೆ ಬೆಳಕು ಕೊಡುತ್ತಿದ್ದಾರೆ. ವಿದ್ಯಾರ್ಥಿಗಳು ಬದಲಾವಣೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಎಸ್‌ಡಿಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಕೆನರಾ ಬ್ಯಾಂಕ್ ಮತ್ತು ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ ಸಹಯೋಗದೊಂದಿಗೆ ಸೋಮವಾರ ಜರುಗಿದ ಸೋಲಾರ್ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿಯಾಗಿದ್ದ ಕೆನರಾ ಬ್ಯಾಂಕ್, ಪುತ್ತೂರಿನ ಡಿವಿಜನ್ ಮ್ಯಾನೇಜರ್ ಸರ್ವೇಶ್ ಮಾತನಾಡಿಸಮಾಜಮುಖಿ ನೆಲೆಯಲ್ಲಿ ಕೆನರಾ ಬ್ಯಾಂಕ್ ಮಾಡುವ ಸಹಾಯದ ಹಿನ್ನೆಲೆಯಲ್ಲಿ ಎಸ್‌ಡಿಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸೋಲಾರ್ ಘಟಕಕ್ಕಾಗಿ ಮೂರು ಲಕ್ಷದ ಸಹಾಯಧನ ನೀಡಲಾಗಿದೆ. ಕೌಶಲ್ಯವಿರುವವರಿಗೆ ಉದ್ಯೋಗ ಅವಕಾಶಗಳಿದ್ದು, ಅದಕ್ಕೆ ಬೇಕಾದ ಹಣಕಾಸಿನ ಸಹಾಯವನ್ನು ಕೆನರಾ ಬ್ಯಾಂಕ್ ಮಾಡುತ್ತದೆ ಎಂದರು.
ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ. ಮಣಿಪಾಲದ ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ ಮಾತನಾಡಿ " ಸೌರಶಕ್ತಿಯ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ವರ್ಷದ ಹಿಂದೆ ಇದೇ ಕಾಲೇಜಿನಲ್ಲಿ ಮಾಡಲಾಗಿತ್ತು. ಪ್ರಾಂಶುಪಾಲರು ಮತ್ತು ಕಾರ್ಯದರ್ಶಿಯವರ ಸಹಕಾರದಿಂದ ಕಾಲೇಜಿನಲ್ಲಿ ಸೋಲಾರ್ ಘಟಕ ಸ್ಥಾಪನೆಯಾಗಿದೆ. ಹವಾಮಾನ ವೈಪರೀತ್ಯಗಳಿಂದ ಪಾರಾಗಲು ಸಾಂಪ್ರದಾಯಿಕ ಶೈಲಿಯ ಶಕ್ತಿಗಳ ಕಡೆ ಗಮನ ನೀಡಬೇಕಾಗಿದ್ದು, ಸೌರಶಕ್ತಿ ಅದಕ್ಕೆ ಉತ್ತಮ ಉದಾಹರಣೆ. ಸೋಲಾರ್ ಬಳಸುವುದರಿಂದ ದೇಶ ಮತ್ತು ಭೂಮಿ ಎರಡಕ್ಕೂ ಕೊಡುಗೆ ನೀಡಿದಂತೆ ಎಂದು ತಿಳಿಸಿದರು.
ನಮ್ಮ ಸಂಸ್ಥೆಯ ಬೆಳವಣಿಗೆಗೆ ಸೆಲ್ಕೊದಿಂದ ಇದೊಂದು ವಿಶೇಷ ಕೊಡುಗೆಯಾಗಿದೆ. ಸೋಲಾರ್ ವಿದ್ಯುತ್ ಘಟಕ ಇತ್ತೀಚಿನ ದಿನಗಳಲ್ಲಿ ತುಂಬಾ ಪ್ರಾಮುಖ್ಯತೆ ಪಡೆಯುತ್ತಿದೆ. ಕೊರತೆಗಳ ಬಗ್ಗೆ ಯೋಚನೆ ಮಾಡಿದರೆ, ಸೌಲಭ್ಯಗಳನ್ನು ಬಳಿಸಿಕೊಳ್ಳುವುದ ದಾರಿ ಸಿಗುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನೀಡುವ ದೃಷ್ಟಿಯಿಂದ, ಅಳಿದು ಹೋಗುವ ಶಕ್ತಿಗಳ ಜಾಗದಲ್ಲಿ ಸೋಲಾರ್ ಘಟಕದ ಅನಿವಾರ್ಯತೆಯಿದೆ ಎಂದು ಕಾರ್ಯಕ್ರಮದ ಅಧ್ಯಕ್ಷರಾದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ನುಡಿದರು.
ಕಾರ್ಯಕ್ರಮದಲ್ಲಿ ಉಜಿರೆ ಕೆನರಾ ಬ್ಯಾಂಕ್ ಘಟಕದ ಪ್ರಭಂದಕರಾದ ರಾಜಶ್ರೀ, ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ. ಮಣಿಪಾಲದ ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಸಂದ್ಯಾ ನಿರೂಪಣೆ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಸ್ವಾಗತಿಸಿ, ವಿದ್ಯಾರ್ಥಿನಿ ಮೇಘನಾ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ