ಉಡುಪಿ : ಜಲಜೀವನ್ ಮಿಷನ್ ಯೋಜನೆಯಡಿ ಸಾರ್ವನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಬಳಕೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಯ ಅಂಗವಾಗಿ ಆಟೋ ಪ್ರಚಾರಕ್ಕೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ಗ್ರಾಮೀಣ ಜನರಿಗೆ ಯೋಜನೆಯ ಅರಿವು ಮೂಡಿಸಿ ಜನರು ಯೋಜನೆಯ ಸದ್ಬಳಕೆ ಪಡೆಯುವ ಸಲುವಾಗಿ ಐ.ಇ.ಸಿ ವಾಹನದ ಮೂಲಕ ಗ್ರಾಮಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಮೋಹನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ