ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಖರೀದಿಸಲು ಡಾ. ಸಿದ್ದಣ್ಣ ಮೇಟಿ ಅವರಿಂದ ಮನವಿ

Upayuktha
0


ಪಣಜಿ: ಗೋವಾ ರಾಜ್ಯದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಕನ್ನಡಿಗರ ಬಹು ವರ್ಷಗಳ ಕನಸಾಗಿದೆ. ಕನ್ನಡ ಭವನ ನಿರ್ಮಾಣಕ್ಕೆ ಗೋವಾ ರಾಜ್ಯದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದಲೇ ಜಾಗ ಖರೀದಿಸಬೇಕಿದೆ. ಈ ನಿಟ್ಟಿನಲ್ಲಿ ಗೋವಾಕ್ಕೆ ಆಗಮಿಸಿ ಜಾಗದ ಪರಿಶೀಲನೆ ನಡೆಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯಾದ್ಯಕ್ಷ ಡಾ. ಸಿದ್ದಣ್ಣ ಮೇಟಿ ಅವರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಬಳಿ ಮನವಿ ಮಾಡಿದರು.


ಹಾವೇರಿಯಲ್ಲಿ ನಡೆದ  86 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಹಾವೇರಿಯಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರು 10 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಈ ಕುರಿತಂತೆ ಗೋವಾ ಸೇರಿದಂತೆ ಮೂರು ರಾಜ್ಯಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಖರೀದಿಸಬೇಕಾಗಿದೆ. ಗೋವಾ ರಾಜ್ಯ ಸರ್ಕಾರದಿಂದ ಕನ್ನಡ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಖರೀದಿಸಲು ಸೂಕ್ತ ಸ್ಪಂದನೆ ಲಭಿಸದ ಕಾರಣ ತಮ್ಮ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದಲೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಖರೀದಿಸಬೇಕಿದೆ. ಗೋವಾಕ್ಕೆ ಆಗಮಿಸಿ ಕನ್ನಡ ಭವನ ನಿರ್ಮಾಣಕ್ಕೆ ಜಾಗದ ಪರಿಶೀಲನೆ ನಡೆಸಬೇಕಾಗಿದೆ ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ಪ್ರಕಾಶ್ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕದ ಪರಿಶಿಷ್ಟ ಜಾತಿ ಪ್ರತಿನಿಧಿ ಶ್ರೀಶೈಲ ಛಲವಾದಿ, ಕಸಾಪ ಉತ್ತರ ಗೋವಾ ಜಿಲ್ಲಾ ಗೌರವಾಧ್ಯಕ್ಷ ನಾಗರಾಜ ಶಾನಭಾಗ್, ಕಸಾಪ ಉತ್ತರ ಗೋವಾ ಜಿಲ್ಲಾ ಗೌರವ ಕಾರ್ಯದರ್ಶಿ ನಿಂಗಪ್ಪ ಪಾಟೋಳೆ, ಕಸಾಪ ಉತ್ತರ ಗೋವಾ ಜಿಲ್ಲಾ ಕಾರ್ಯದರ್ಶಿ ರಾಜಶೇಖರ್ ಶೆಟ್ಟಿ, ಮಾಪ್ಸ ತಾಲೂಕು ಘಟಕದ ಕಾರ್ಯದರ್ಶಿ ಶೇಖರಯ್ಯ ಕಲಾಲ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

               

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top