ಪುತ್ತೂರು : ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಆವರಣದಲ್ಲಿ ಫೆಬ್ರವರಿ 10 ಶುಕ್ರವಾರದಿಂದ 12 ಆದಿತ್ಯವಾರದವರೆಗೆ ನಡೆಯಲಿರುವ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಎನ್ನುವ ಬೃಹತ್ ಪ್ರದರ್ಶನದ ಚಪ್ಪರ ಮುಹೂರ್ತವು ಕಾಲೇಜಿನ ಕ್ರೀಡಾಂಗಣದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಸತೀಶ್ ರಾವ್.ಪಿ, ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್, ಕ್ಯಾಂಪ್ಕೋ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ಕುಮಾರ್, ಕ್ಯಾಂಪ್ಕೋ ನಿರ್ದೇಶಕರು ಹಾಗೂ ಪೂರ್ವ ಅಧ್ಯಕ್ಷರಾದ ಸತೀಶ್ಚಂದ್ರ.ಎಸ್.ಆರ್ ಮುಹೂರ್ತ ಕಂಬ ನೆಡುವುದರ ಮೂಲಕ ಚಪ್ಪರ ಮುಹೂರ್ತವನ್ನು ನೆರವೇರಿಸಿದರು.
ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ಭಟ್ ಕೆದಿಲ, ಎಆರ್‍ಡಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಭಟ್, ಕ್ಯಾಂಪ್ಕೋದ ಎಜಿಎಂಗಳಾದ ಲಕ್ಷ್ಮಣ ಡೋಂಗ್ರೆ, ಅನೂಪ್, ಶ್ಯಾಂಪ್ರಸಾದ್, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕರಾದ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್.ಬಿ, ನಿರ್ದೇಶಕರು ಮತ್ತು 5ನೇ ಕೃಷಿ ಯಂತ್ರ ಮೆಳದ ಮುಖ್ಯ ಸಂಯೋಜಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಬಾಸ್ಕರ್, ಇಂಜಿನಿಯರಿಂಗ್ ಕಾಲೇಜಿನ ವಿಭಾಗ ಮುಖ್ಯಸ್ಥರು ಮತ್ತು ಉಪನ್ಯಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ