ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಹಯೋಗದಲ್ಲಿ MAAM ಆಯೋಜನೆ
ಬೆಂಗಳೂರು: ಮೀಡಿಯಾ ಅಲುಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (MAAM) ವತಿಯಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಹಯೋಗದಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ವಿರುದ್ಧ ಯುವ ಜನರಲ್ಲಿ ಜಾಗೃತಿ ಮೂಡಿಸಲು ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ.
ಮಾಯಾ ಮಾದಕ ಎಂಬ ಪ್ರಸಂಗವನ್ನು ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಇವರು ಫೆ.4ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸ್ತುತಪಡಿಸಲಿದ್ದಾರೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಸವಣ್ಣೆಪ್ಪ ತುಬಾಕಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಡಳಿಯ ಕಾರ್ಯದರ್ಶಿ ಎಸ್. ಶಂಕರಪ್ಪ ಮತ್ತು ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಪ್ರತಿಭಾ ಪಾರ್ಶ್ವನಾಥ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
MAAM ಅಧ್ಯಕ್ಷ ನವೀನ್ ಅಮ್ಮೆಂಬಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಮ್ ಗೌರವಾಧ್ಯಕ್ಷರಾದ ವೇಣು ಶರ್ಮ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ