ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳ ಸಂಘದ(ರಿ) ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಫೆ.1ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಉರ್ವಾಸ್ಟೋರ್ ನಲ್ಲಿರುವ ತುಳುಭವನದ ಸಿರಿ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಯು.ಟಿ. ಖಾದರ್, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮನಾಥ್ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಹಾಗೂ ದ.ಕ. ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷವಿಶ್ವನಾಥ ಪಿ. ಕಾಟಿಪಳ್ಳ ಭಾಗವಹಿಸುವರು. ನಗರದ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಕರುಣಾಕರ ಬಳ್ಕೂರು ಉಪನ್ಯಾಸ ನೀಡಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ