ಪೋರ್ಟ್ ವಾರ್ಡಿನ ಗೂಡ್ಸ್ ಶೆಡ್ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮಂಗಳೂರು: ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿದ್ದು, ಅಭಿವೃದ್ಧಿಯ ಸೂಚ್ಯಂಕದಲ್ಲಿ ನಗರವು ಅತಿ ಶೀಘ್ರವಾಗಿ ಪ್ರಮುಖ ಸ್ಥಾನವನ್ನು ಪಡೆಯಲಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಅವರು ನಗರದ ಪೋರ್ಟ್ ವಾರ್ಡಿನ ಗೂಡ್ಸ್ ಶೆಡ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಇಂದು (ಗುರುವಾರ, ಜ.26) ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ರಾಜ್ಯ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್, ಬಿಜೆಪಿ ಮುಖಂಡರಾದ ಅನಿಲ್ ಕುಮಾರ್ ಹೈೂಗೆಬಜಾರ್, ಯೋಗೀಶ್ ಕಾಂಚನ್, ವಸಂತ್ ಜೆ ಪೂಜಾರಿ, ದೀಪಕ್ ಕುಮಾರ್, ಮಹಾಬಲ ಶೆಟ್ಟಿ, ಸರೋಜಾ ಶೆಟ್ಟಿ, ಶಾಂತಕ್ಕ, ಶಾಂತ ಬೆಳ್ಚಾಡ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ