ಮಂಗಳೂರು: ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ ರಸ್ತೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ರಸ್ತೆ ಅಗಲೀಕರಣದ ಜೊತೆಗೆ ರಾಜ ಕಾಲುವೆಗಳ ಅಭಿವೃದ್ಧಿಗೂ ಯೋಜನೆ ರೂಪಿಸಲಾಗಿದೆ. ಅನೇಕ ಕಡೆಗಳಲ್ಲಿ ರಾಜಕಾಲುವೆಯ ತಡೆಗೋಡೆ ಜೀರ್ಣಾವಸ್ಥೆಯಲ್ಲಿದ್ದು ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಕೃತಕ ನೆರೆ ಹಾವಳಿ ತಡೆಗಟ್ಟಲು ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ನಗರದ ಇತಿಹಾಸದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿರುವುದು ನಮ್ಮ ಆಡಳಿತದ ಸಾಧನೆ ಎಂದು ಹೇಳಿದರು.
ಮರೋಳಿ ವಾರ್ಡಿನ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರ ಮನವಿಯಂತೆ ಪಂಪ್ವೆಲ್ ಬಳಿಯಲ್ಲಿರುವ ರಾಜಕಾಲುವೆಗೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದ ಅನೇಕ ಕಡೆಗಳಲ್ಲಿ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಎಂ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೆಟರ್ ಕೇಶವ ಮರೋಳಿ, ಸಂದೀಪ್ ಗರೋಡಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ಮಾರೋಳಿ, ಕೃಷ್ಣ ಎಸ್ ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ, ಬೋಜ ಅಮೀನ್, ಅನಿತಾ, ಸುನಿಲ್, ಸತೀಶ್, ಸುಧಾಕರ್, ಚಂದ್ರವತಿ, ರುಕ್ಮಿಣಿ, ರಾಜೀವಿ, ಮಧು, ರಾಜೇಶ್, ಸುಂದರ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ