ಮಂಗಳೂರು: ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಜನವರಿ 13 ರಿಂದ 15 ರವರೆಗೆ ಗೋ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಅನುಗ್ರಹ, ಕೃಪೆ ಮತ್ತು ಆಶೀರ್ವಾದಗಳೊಂದಿಗೆ ಸಂಸ್ಥೆಯ ಅಂಗಸಂಸ್ಥೆಯಲ್ಲಿ ಗೋಶಾಲೆ ಇರಬೇಕೆಂಬ ಆಶಯದಂತೆ ಶಾಲೆಯಲ್ಲಿ ಗೋಶಾಲೆ ನಿರ್ಮಿಸಲಾಗಿದೆ. ಶ್ರೀ ಸಂಸ್ಥಾನದವರ ಮಾರ್ಗದರ್ಶನದಲ್ಲಿ ಭಾನ್ಕುಳಿಯ ಗೋಸ್ವರ್ಗದಲ್ಲಿ ಜ.12 ರಿಂದ 15 ರವರೆಗೆ ಗೋ ದಿನ ನಡೆಯಲಿದ್ದು, ಅದೇ ದಿನಗಳಲ್ಲಿ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲೂ ಪ್ರತೀ ವರ್ಷವೂ ಗೋ ದಿನ ಆಚರಿಸಲಾಗುತ್ತಿದೆ.
ಸಂಸ್ಥೆಯ ವಿದ್ಯಾರ್ಥಿಗಳು ದೇಸೀ ಗೋವುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕೆಂಬ ನಿಟ್ಟಿನಲ್ಲಿ ಇದು ವಿಶೇಷ ಪ್ರಯತ್ನವೂ ಆಗಿದೆ. ಈ ಮೂರೂ ದಿನಗಳಲ್ಲಿ ಗೋಭಕ್ತರೆಲ್ಲರೂ ಪಾಲ್ಗೊಳ್ಳಲು ಅವಕಾಶವಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ