ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್ 2022 ವಾರ್ಷಿಕೋತ್ಸವ

Chandrashekhara Kulamarva
0


ಮಂಗಳೂರು: ಇಲ್ಲಿನ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸಾವಿಷ್ಕಾರ್ 2022 ವಾರ್ಷಿಕೋತ್ಸವ ಸಮಾರಂಭ ದಿನಾಂಕ 31-12-2022 ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು.


ಸಮಾರಂಭವನ್ನು ದೀಪ ಬೆಳಗಿಸಿ ಮತ್ತು ಸಾಂಪ್ರದಾಯಿಕವಾಗಿ ಹಿಂಗಾರ ಅರಳಿಸಿ ಉದ್ಘಾಟಿಸಿದ ಕಾರ್ಪೊರೇಟರ್ ಶಕೀಲಾ ಕಾವ ಅವರು, ಇದೊಂದು ವಿದ್ಯಾದೇಗುಲದಂತೆ ಭಾಸವಾಗುತ್ತಿದೆ. ಸಂಸ್ಕಾರವಂತ ವಿದ್ಯಾರ್ಥಿಗಳನ್ನು ನೀಡುತ್ತಿರುವ ಈ ಸಂಸ್ಥೆ ನನ್ನ ಕ್ಷೇತ್ರದಲ್ಲಿದೆ ಎಂಬ ಹೆಮ್ಮೆಯಿದೆ ಎಂದರು. 


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಂಗನ್ ಡಿಸ್ಟ್ರಿಬ್ಯೂಟರ್ಸ್ ಇದರ ನಿರ್ದೇಶಕ ರಾಜೇಶ್  ನಾಯರ್ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಕೆಗಾಗಿ ಮಾತ್ರ ಓದದೆ ವಿದ್ಯಾಭ್ಯಾಸದೊಂದಿಗೆ ಜೀವನ ಪಾಠವನ್ನೂ ಕಲಿಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಿಟ್ಟೆಲ್ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಠ್ಠಲ ಎ. ಮಾತನಾಡಿ, ಇಲ್ಲಿ ಶಿಕ್ಷಣಕ್ಕೆ ಪೂರಕವಾದ ವಾತಾವರಣ, ಉತ್ತಮ ಬೋಧಕವೃಂದ ವಿದ್ಯಾರ್ಥಿಗಳ ಸಾಧನೆಗೆ ದಾರಿದೀಪವಾಗಿದೆ. ಹಾಗೆಯೇ ಶಿಕ್ಷಣ ಇಲಾಖೆಯ ಯೋಜನೆಗಳಿಗೆ ಕೈಜೋಡಿಸುವ ಈ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರವನ್ನು ನೀಡುತ್ತಿದೆ ಎಂದರು.


ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣದಿಂದ ವಿದ್ಯಾರ್ಥಿಯ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಂಸ್ಥೆಯ ರಾಯಭಾರಿಗಳು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್‌ದಾಸ್ ಹಾಗೂ ಪ್ರೌಢಶಾಲೆ ಮತ್ತು ಪ.ಪೂ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ, ಮಂಥನ - 2022 ವರದಿ ವಾಚನ ಮಾಡಿದರು.


ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಹುಮಾನಿತರ ಪಟ್ಟಿಯನ್ನು ಶಿಕ್ಷಕಿಯರಾದ ನಿಖಿತಾ, ಪವಿತ್ರಾ, ಸುಶ್ಮಿತಾ, ವೀಣಾ, ಸಾವಿತ್ರಿ ವಾಚಿಸಿದರು. ಉಪ ಪ್ರಾಂಶುಪಾಲೆ ಗಾಯತ್ರಿ ಶೆಣೈ ಸ್ವಾಗತಿಸಿ, ಸಂಸ್ಥೆಯ ಸಂಯೋಜಕಿ ಜಯಂತಿ ವಂದಿಸಿದರು. ರಶ್ಮಿ ನಿರೂಪಿಸಿದರು.


ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ :


ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಶೆಣೈ, ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸುಂದರವಾದ ಭವಿಷ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸೇವಾಸಮಿತಿಯ ಕೋಶಾಧಿಕಾರಿ ಉದಯಶಂಕರ ನೀರ್ಪಾಜೆ  ಪೋಷಕರು, ವಿದ್ಯಾರ್ಥಿಗಳು, ಬೋಧಕ ಬೋಧಕೇತರ ವೃಂದದವರು ವಿಶೇಷ ಮುತುವರ್ಜಿ ವಹಿಸಿ ಸಾವಿಷ್ಕಾರ್ -  2022 ವಾರ್ಷಿಕೋತ್ಸವವನ್ನು ಯಶಸ್ವಿಗೊಳಿಸಿದ್ದಾರೆ ಎಂದರು.


ಮುಖ್ಯ ಅತಿಥಿಗಳಾಗಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ತೇಜ ಪೂಜಾರಿ ಮತ್ತು ರಾಜಗೋಪಾಲ್, ಸಂಘಟನಾ ಕಾರ್ಯದರ್ಶಿ ಜನಾರ್ದನ, ಜೊತೆ ಕಾರ್ಯದರ್ಶಿಗಳಾದ ಮಹಾಬಲೇಶ್ ಭಟ್, ಜೊತೆ ಕೋಶಾಧಿಕಾರಿ ವಿಶ್ವನಾಥ್, ಪದವಿ ಪ್ರಾಂಶುಪಾಲರಾದ ಪ್ರೊ.ಜೀವನ್‌ದಾಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತೇಶ್ ದೇವಾಂಗ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಹಾಗೆಯೇ ದತ್ತಿನಿಧಿ ಪುರಸ್ಕಾರಗಳನ್ನೂ ನೀಡಲಾಯಿತು. ಈ ಪಟ್ಟಿಯನ್ನು ಶಿಕ್ಷಕಿ ರಶ್ಮಿ ಪಿ.ಎಸ್. ವಾಚಿಸಿದರು. ಶಿಕ್ಷಕಿಯರಾದ ಭಾರತೀ ಸ್ವಾಗತಿಸಿ, ರಾಜೇಶ್ವರಿ ವಂದಿಸಿದರು. ಉಪನ್ಯಾಸಕ ಕಾರ್ತಿಕ್‌ ಕೃಷ್ಣ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


إرسال تعليق

0 تعليقات
إرسال تعليق (0)
To Top