ಮಂಗಳೂರು: ಹೆಸರಾಂತ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಅವರ ನೂತನ ಆಡಳಿತ ಕಚೇರಿಯ ಉದ್ಘಾಟನೆ ಬಿಜೈ- ಕಾಪಿಕಾಡ್‌ನ ನ್ಯೂ ಬೆರಿ ಎನ್‌ಕ್ಲೇವ್‌ನಲ್ಲಿ ಸೋಮವಾರ (ಜ.23) ಬೆಳಗ್ಗೆ 10:00 ಗಂಟೆಗೆ ನಡೆಯಲಿದೆ.
ದ.ಕ ಜಿಲ್ಲಾ ಉಸ್ತುವಾರಿ ಹಾಗೂ ವಿದ್ಯುತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಲಿದ್ದಾರೆ.
ಮಂಗಳೂರಿನ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ ವಿಶ್ವೇಶ್ವರಿ ಅವರ ದಿವ್ಯ ಉಪಸ್ಥಿತಿ ಇರಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಭಾಗವಹಿಸಲಿದ್ದಾರೆ.
ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮೂಡುಬಿದರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಮಂಗಳೂರು ಮಹಾನಗರಪಾಲಿಕೆ ಮೇಯರ್ ಜಯಾನಂದ ಅಂಚನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೋ, ಮನಪಾ ಕಾರ್ಪೊರೇಟರ್ ಲ್ಯಾನ್ಸ್‌ಲಾಟ್ ಪಿಂಟೋ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಶಾಂತ್ ಕೆ ಸನಿಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ